ಬಾಲಿವುಡ್ ನಟಿ ಪೂನಂ ಪಾಂಡೆ (Poonam Pandey) ಸಾವನ್ನಪ್ಪಿರುವ ಕುರಿತು ದೊಡ್ಡ ಸುದ್ದಿ ಹಬ್ಬಿತ್ತು. ಆದರೆ, ಈಗ ಸ್ವತಃ ಅವರೇ ನಾನು ಸತ್ತಿಲ್ಲ ಎಂದು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಪಾಂಡೆ ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್ (Cancer)ನಿಂದಾಗಿ ಪೂನಂ ನಿಧನರಾಗಿದ್ದಾರೆ (Death) ಎಂದು ಪೋಸ್ಟ್ ಹಾಕಿದ್ದರು. ಇದರಿಂದಾಗಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಈ ಕುರಿತು ದೇಶದಲ್ಲಿ ಸಾಕಷ್ಟ ಚರ್ಚೆಗಳು ನಡೆದಿದ್ದವು. ಆದರೆ, ನಿಜ ಸಂಗತಿ ಸಂಪೂರ್ಣವಾಗಿ ಹೊರಗೆ ಬಂದಿರಲಿಲ್ಲ. ಹೀಗಾಗಿ ಹಲವಾರು ಅನುಮಾನಗಳು ಮೂಡುತ್ತಿದ್ದವು. ಈ ಮಧ್ಯೆ ಸ್ವತಃ ಪಾಂಡೆ ನಾನು ಸತ್ತಿಲ್ಲ ಎಂದು ಹೇಳಿದ್ದಾರೆ.
ನಾನು ಬದುಕಿದ್ದೇನೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹೀಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ. ಆದರೆ, ಅವರು ಸಾವನ್ನಪ್ಪಿಲ್ಲ ಎಂಬ ಸುದ್ದಿ ಕೇಳಿ ಹಲವರು ಸಂತಸ ವ್ಯಕ್ತಪಡಿಸಿದ್ದರೆ, ಹಲವರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.