ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ರನ್ನು (Darshan) ರಚಿತಾ ರಾಮ್ (Rachita Ram) ಭೇಟಿಯಾಗಿ ತುಂಬಾ ನೋವು ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜನನ್ನು ರಾಜನ ಥರ ನೋಡುವುದೇ ಅಂದ. ಅವರನ್ನು ಹಾಗೆಯೇ ನೋಡಬೇಕು ಎಂದು ಭಾವುಕರಾಗಿ ಮಾತನಾಡಿದ್ದಾರೆ.
ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಆದರೆ, ಅವರನ್ನು ಜೈಲಿನಲ್ಲಿ ನೋಡುವುದು ತುಂಬಾ ಕಷ್ಟ. ಎಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾವೆಲ್ಲ ನಿಮಗಾಗಿ ಕಾಯುತ್ತಿದ್ದೇವೆ ಎಂದು ಅವರಿಗೆ ಹೇಳಿದ್ದೇನೆ. ಪ್ಲೀಸ್ ಬೇಗ ಬನ್ನಿ ಅಂತ. ನನಗೆ ಕಾನೂನು ಮೇಲೆ ನಂಬಿಕೆ ಇದೆ. ದರ್ಶನ್ ಸರ್ ಆದಷ್ಟು ಬೇಗ ಹೊರಗೆ ಬರುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ರಾಜನನ್ನು ರಾಜನ ಥರನೇ ನನಗೆ ನೋಡುವುದು ಇಷ್ಟ. ಇವತ್ತು ಅವರನ್ನು ನೋಡಿ ನಿರಾಳವಾಯಿತು. ಅವರು ಆರೋಗ್ಯವಾಗಿದ್ದಾರೆ. ನಾನು ಅವರ ಬ್ಯಾನರ್‌ನಿಂದ ಪರಿಚಯ ಆದವಳು. ನನಗೆ ಇವತ್ತು ಏನೇ ಹೆಸರು ಇದ್ದರೂ ಅದು ಅವರಿಂದ ಸಿಕ್ಕಿದೆ. ಅವರು ಅವತ್ತು ಒಪ್ಪಿಕೊಂಡಿದಕ್ಕೆ ನಾನು ಬಿಂದ್ಯಾ ರಾಮ್ ನಿಂದ ರಚಿತಾ ರಾಮ್ ಆಗಿ ಬೆಳೆದಿದ್ದೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ. ಅವರೇ ನನಗೆ ಸಮಾಧಾನ ಮಾಡಿದ್ದಾರೆ. ಅವರು ಆದಷ್ಟು ಬೇಗ ಈ ಪ್ರಕರಣದಿಂದ ಆಚೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಣ್ಣೀರು ಸುರಿಸದ್ದಾರೆ.








