ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ನಂಟಿನ ಕೇಸ್ನಲ್ಲಿ ಮಾದಕ ನಟಿ, ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸತತ 7 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ನಟಿ ರಾಗಿಣಿಯನ್ನು ಬಂಧಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ರವಿಶಂಕರ್ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದರು.
ರವಿಶಂಕರ್ ಹಾಗೂ ರಾಗಿಣಿಯನ್ನು ಸಿಸಿಬಿ ಪೊಲೀಸರು ಮುಖಾಮುಖಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಿಕ್ಕ ಮಾಹಿತಿ ಅಧರಿಸಿದ ಮೊದಲು ಎಫ್ಐಆರ್ ದಾಖಲಿಸಿ ನಂತರ ಅರೆಸ್ಟ್ ಮಾಡಲಾಗಿದೆ.
ಡ್ರಗ್ಸ್ ಜಾಲದ ಆರೋಪದಡಿ ಸ್ಯಾಂಡಲ್ವುಡ್ನ ಮೊದಲ ನಟಿ ರಾಗಿಣಿ ಆರೆಸ್ಟ್ ಆಗಿದ್ದಾರೆ. ರಾಗಿಣಿ ಬಂಧನ ಚಿತ್ರರಂಗದ ಉಳಿದ ನಟ-ನಟಿಯರಲ್ಲಿ ಡವ-ಡವ ಶುರುವಾಗಿದೆ.
ರಾಗಿಣಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮೊದಲು ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಹೆಚ್ಚಿನ ತನಿಖೆಗೆ ತಮ್ಮ ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ನ್ಯಾಯಾಧೀಶರಲ್ಲಿ ಮನವಿ ಮಾಡಲಿದ್ದಾರೆ.
ನಾಳೆ ಕೋರ್ಟ್ ಕಲಾಪ ಇಲ್ಲದ ಕಾರಣ ರಾಗಿಣಿ ಅವರು ಸೋಮವಾರದವರೆಗೆ ಸಿಸಿಬಿ ವಿಚಾರಣೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸೋಮವಾರ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಬೇಕು. ಜಾಮೀನು ಅರ್ಜಿ ವಿಚಾರಣೆ ನಡೆದು, ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪು ಪ್ರಕಟಿಸಲಿದೆ. ಅಲ್ಲಿಯವರೆಗೆ ರಾಗಿಣಿಗೆ ಸಿಸಿಬಿ ಕಸ್ಟಡಿಯೋ ಅಥವಾ ಪರಪ್ಪನ ಅಗ್ರಹಾರ ಜೈಲೋ ಎಂಬುದು ತಿಳಿಯಲಿದೆ.
ಶ್ರೀ ಯಂತ್ರೋದ್ಧಾರಕ ಹನುಮತ್ ಸ್ತೋತ್ರಂ ಸನಾತನ ಭಾರತದ ವಿಶಿಷ್ಟ ವಿಷಯಗಳನ್ನು ತಿಳಿಯಲು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ...








