ನಟಿ ರಶ್ಮಿಕಾ ಮಂದಣ್ಣ ಅವರು ತುಂಬಾ ಅದೃಷ್ಟವಂತೆ ಎಂಬ ಮಾತು ಸಿನಿ ರಂಗದಲ್ಲಿ ಕೇಳಿ ಬರುತ್ತಿದೆ. ಬಹುತೇಕ ಸ್ಟಾರ್ ನಟರೊಂದಿಗೆ ಅಭಿನಯಿಸುವ ಅವಕಾಶ ಸಿಗುತ್ತಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ರಶ್ಮಿಕಾ ಅವರು ಅನಿಮಲ್ ಚಿತ್ರದ ಯಶಸ್ಸಿನ ನಂತರ ಕಾಲಿವುಡ್ ಸ್ಟಾರ್ ನಟನಿಗೆ ನಾಯಕಿಯಾಗಿದ್ದಾರೆ. ಧನುಷ್ ಅವರ 51ನೇ ಸಿನಿಮಾ ಶೂಟಿಂಗ್ನಲ್ಲಿ ನಟಿ ಭಾಗಿಯಾಗಿರುವ ವಿಡಿಯೋ ಲೀಕ್ ಕೂಡ ಆಗಿದ್ದು, ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.
ಧನುಷ್ ಕೈ ಹಿಡಿದು ರಶ್ಮಿಕಾ ಎಳೆದೊಯ್ಯುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ರಶ್ಮಿಕಾ ಬಿಳಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ. ಈ ಚಿತ್ರ ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಮತ್ತು ಹೇಗೆ ಹೊರಗೆ ಬರುತ್ತಾನೆ ಎಂಬುವುದನ್ನೇ ಈ ಕತೆ ಹೊಂದಿದೆ.
ಈ ಚಿತ್ರವನ್ನು ಶೇಖರ್ ಕಮ್ಮುಲ ನಿರ್ದೇಶನ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ರಶ್ಮಿಕಾ-ಧನುಷ್ ಒಟ್ಟಿಗೆ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.