ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಡೀಪ್ ಫೇಕ್ ಸುಳಿಗೆ ಒಳಗಾಗಿದ್ದಾರೆ.
ಈ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಂದು ಡೀಪ್ ಫೇಕ್ ಪ್ರಕರಣ ಬೆಳಕಿಗೆ ಬಂದಿದೆ. ಮಾಡೆಲ್ ಕಂ ಕಂಟೆಂಟ್ ಕ್ರಿಯೇಟರ್ ಡೇನಿಯಾಲ ವಿಲ್ಲಾರ್ರಿಯಲ್ (Daniela Villarreal) ವಿಡಿಯೋಗೆ ರಶ್ಮಿಕಾರ ಮುಖವನ್ನು ಅಂಟಿಸಲಾಗಿದೆ.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿ, ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಹೇಳಿದ್ದರು. ಸರ್ಕಾರ ಕೂಡ ಹಲವು ನಿಯಮಗಳನ್ನು ಜಾರಿಗೆ ತಂದು ಡೀಪ್ ಫೇಕ್ ವಿರುದ್ಧ ಸಮರ ಸಾರಿದೆ.