Rupa Dutta : ಪಿಕ್ ಪಾಕೆಟ್ ಪ್ರಕರಣದಲ್ಲಿ ಖ್ಯಾತ ನಟಿ ಅರೆಸ್ಟ್
ಖ್ಯಾತ ಬೆಂಗಾಳಿ ನಟಿ ರೂಪಾ ದತ್ತಾ ಪಿಕ್ ಪಾಕೆಟ್ ಮಾಡಿರುವ ಆರೋಪದಲ್ಲಿ ಅರೆಸ್ಟ್ ಆಗಿದ್ದಾರೆ. ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದ ವೇಳೆ ಪರ್ಸ್‍ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರು ನೋಡಿದ್ದಾರೆ.. ನಂತರ ಅವರನ್ನ ಶನಿವಾರ ಬಂಧಿಸಿದ್ದಾರೆ.
ಈ ಬಗ್ಗೆ ಬಿದಾನ್ ನಗರ್ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಬಂಧನದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧದ ವೇಳೆ ಆಕೆಯ ಬ್ಯಾಗ್‍ನಿಂದ ಅನೇಕ ಪರ್ಸ್‍ಗಳು ಮತ್ತು 75 ಸಾವಿರ ರೂ. ನಗದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೇ ಈ ಹಣದ ಮೂಲದ ಬಗ್ಗೆ ರೂಪಾ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎನ್ನಲಾಗಿದೆ.. ಇವರು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿರುವ ಆರೋಪವಿದೆ. ಈ ಅಪರಾಧದಲ್ಲಿ ಹೆಚ್ಚಿನ ಜನರು ತೊಡಗಿಕೊಂಡಿರಬಹುದೇ ಎಂಬ ಅನುಮಾನವೂ ಇದ್ದು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ಧಾರೆ. ಪ್ರಸ್ತುತ ರೂಪಾ ದತ್ತಾಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಬ್ಯಾಗ್ ತನ್ನದಲ್ಲ ಎಂದಿರುವ ನಟಿ, ಅದು ಡಸ್ಟ್ ಬಿನ್‌ನಿಂದ ಎತ್ತಿಕೊಂಡಿರುವ ಚೀಲ ಎಂದು ಹೇಳಿದ್ದಾರೆ.