ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ….
ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಲ್ರಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ವಿಶೇಷವೆಂದರೆ ಇಂದು ಸಂಜನಾ ಗಲ್ರಾನಿ ತಂಗಿ ನಿಕ್ಕಿ ಗಲ್ರಾನಿ ಸಪ್ತಪದಿ ತುಳಿದಿದ್ದಾರೆ. ಇದೇ ದಿನ ಸಂಜನಾ ಗಂಡು ಮಗುವಿಗೆ ತಾಯಿಯಾಗಿದ್ದಾರೆ.
ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ನಟಿ ಸಂಜನಾ, ಬಳಿಕ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ್ರು. ಬಳಿಕ ಅಜೀಜ್ ಪಾಷಾ ಅವರೊಂದಿಗೆ ಸಂಜನಾ ವಿವಾಹವಾಗಿದ್ದರು.
ಕೆಲ ದಿನಗಳ ಹಿಂದೆಯಷ್ಟೆ ಸಂಜನ ಸರಳವಾಗಿ, ಸೀಮಂತ ಶಾಸ್ತ್ರ ಆಚರಿಸಿಕೊಂಡಿದ್ದರು. ಇದರ ಬೆನ್ನೆಲ್ಲೇ ಸಂಜನಾ ಗಲ್ರಾನಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದರು.
ಸಂಜನಾ ಗಲ್ರಾನಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೈದರಾಬಾದ್ ಖಾಸಗಿ ಆಸ್ಪತ್ರೆ ವೈದ್ಯೆ ಶಿಲ್ಪಾ ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ.
Actress Sanjana Galrani gave birth to baby boy