ನಟಿ, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ದೂರವಾಗಿದ್ದಾರಾ? (Divorce) ಎಂಬ ಮಾತು ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.
ರಾಜ್ ಕುಂದ್ರಾ ಮಾಡಿರುವ ಎಕ್ಸ್ ನಿಂದ ಇಂತಹ ಸಂಶಯವೊಂದು ಬಂದಿದೆ. ನಾವು ಬೇರ್ಪಟ್ಟಿದ್ದೇವೆ. ಕಷ್ಟದ ಈ ಸಮಯದಲ್ಲಿ ನೀವು ನಮಗಷ್ಟು ಸಮಯ ಕೊಡಿ’ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಗಣೇಶೋತ್ಸವ ವೇಳೆ ಮನೆಯಲ್ಲಿ ಪತ್ನಿ ಶಿಲ್ಪಾ ಶೆಟ್ಟಿ ಜೊತೆಯೇ ಡಾನ್ಸ್ ಮಾಡಿ ಸಂಭ್ರಮಿಸಿದ್ದರು. ಅದ್ದೂರಿಯಾಗಿ ಗಣಪತಿ ಹಬ್ಬವನ್ನು ಆಚರಿಸಲಾಗಿತ್ತು. ಆದರೆ, ದಿಢೀರ್ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಶ್ಲೀಲ ಚಿತ್ರ ನಿರ್ಮಾಣದ ವಿಚಾರವಾಗಿ ರಾಜ್ ಕುಂದ್ರಾ ಜೈಲಿಗೆ ಹೋಗಿ ಬಂದಿದ್ದರು.