ಖ್ಯಾತ ನಟಿ ಶ್ರೀದೇವಿ (Sridevi) ಅವರ ಸಾವಿನ ಕುರಿತು ಹಲವಾರು ಅನುಮಾನಗಳು ಇಂದಿಗೂ ಇವೆ. ನಟಿ 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾಗಿದ್ದರು. ಸ್ಟಾರ್ ಹೋಟೆಲ್ನ ಬಾತ್ಟಬ್ನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದರು.
ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್ (Boney Kapoor) ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಕುರಿತು ಮಾತನಾಡಿದ್ದಾರೆ. ‘ದಿ ನ್ಯೂ ಇಂಡಿಯನ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೇನೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು ಎಂದು ಹೇಳಿದ್ದಾರೆ.
ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್ ಸಾವು ಎಂಬುದು ತಿಳಿಯಿತು ಎಂದು ಹೇಳಿದ್ದಾರೆ. ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ತಿಳಿಸಿದ್ದಾರೆ. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಎಂದು ವೈದ್ಯರು ಹೇಳುತ್ತಿದ್ದರು ಎಂದು ಹೇಳಿದ್ದಾರೆ.