ಇಂದು ಆನೇಕಲ್ ನಲ್ಲಿ ನಟಿ ತಾರ ಅವರ ತಾಯಿ ಪುಷ್ಪಾ ಅಂತ್ಯಕ್ರಿಯೆ…
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅವರ ತಾಯಿ ಪುಷ್ಪಾ ನಿನ್ನೆ ಮೈಸೂರಿನಲ್ಲಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ. 76 ವರ್ಷದ ಪುಷ್ಪಾ ಅವರು ತಾರಾ ಅವರ ಜೊತೆ ಮೈಸೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣದ ವೇಳೆ ತೀವ್ರವಾಗಿ ವಾಂತಿಯಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ತಾರ ಅವರ ಜೊತೆಯೇ ತಾಯಿ ಪುಷ್ಪ ಇರುತ್ತಿದ್ದರು. ಪುಷ್ಪ ಅವರಿಗೆ ತಾರ ಸೇರಿದಂತೆ ಇಬ್ಬರು ಪುತ್ರಿಯರು ಒಬ್ಬ ಪುತ್ರರಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ತಾರಾ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಸಿನಿಮಾದ ಮತ್ತು ರಾಜಕೀಯದ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಇನ್ನೂ ತಾರಾ ಅನುರಾಧ ಅವರ ತಾಯಿ ನಿಧನಕ್ಕೆ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಮತ್ತು ಹಿರಿಯ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಆನೆಕಲ್ ನಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.








