ಮುದ್ದು ಮುಖದ ಚೆಲುವೆ ತೇಜಸ್ವಿನಿ ಪ್ರಕಾಶ್ ಗೆ ಮದುವೆಯ ಸಂಭ್ರಮ
ಸ್ಯಾಂಡಲ್ವುಡ್, ಕಿರುತೆರೆಯಲ್ಲಿ ಮಿಂಚಿದ ನಟಿ ತೇಜಸ್ವಿನಿ ಪ್ರಕಾಶ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನಿನ್ನೆ ಅರಿಶಿಣ ಶಾಸ್ತ್ರವನ್ನು ಅದ್ಧೂರಿಯಾಗಿ ಮಾಡಲಾಗಿದೆ. ಕುಟುಂಬಸ್ಥರು, ಸಿನಿಮಾ ಕಲಾವಿದರು, ಆಪ್ತರು ಕೆಲವು ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ತೇಜಸ್ವಿನಿ ಪ್ರಕಾಶ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ.
ತೇಜಸ್ವಿನಿ ಅವರ ಅರಿಶಿಣ ಶಾಸ್ತ್ರದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭ ಕೋರುತ್ತಿದ್ದಾರೆ. ತಮ್ಮ ಬಾಲ್ಯದ ಗೆಳಯನಾದ ಫಣಿ ವರ್ಮ ಜೊತೆ ವಿವಾಹವಾಗಿದ್ದಾರೆ. ಅರಿಶಿಣ ಶಾಸ್ತ್ರದಲ್ಲಿ ಸ್ಯಾಂಡಲ್ವುಡ್ ನಟಿ ಕಾರುಣ್ಯ ರಾಮ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಮದುವೆಯಲ್ಲಿ ಸಿನಿಮಾ ರಂಗದ ಹಲವು ಕಲಾವಿದರು ಭಾಗಿಯಾಗುವ ಸಾಧ್ಯತೆ ಇದೆ
2008ರಲ್ಲಿ ತೆರೆಕಂಡ ದರ್ಶನ್ ಅಭಿನಯದ ಗಜ ಚಿತ್ರದ ಪಾತ್ರವೊಂದರಲ್ಲಿ ತೇಜಸ್ವಿನಿ ಕಾಣಿಸಿಕೊಂಡಿದ್ದರು. 2016ರಿಂದ 2017ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ನಿಹಾರಿಕಾ ಧಾರವಾಹಿಯಲ್ಲಿ ಲೀಡ್ ರೋಲ್ ನಲ್ಲಿ ಅಭಿನಯಿಸಿದರು. ಈ ಹಿಂದೆ ಅವರು ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ ಮೊದಲಾದ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಒಟ್ಟು 22 ಚಿತ್ರಗಳಲ್ಲಿ ನಟಿಸಿದ್ದಾರೆ. 2017ರಲ್ಲಿ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5ರಲ್ಲಿ ತೇಜಸ್ವಿನಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. 28 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದು, ನಂತರ ಎಲಿಮಿನೇಟ್ ಆಗಿದ್ದರು.