15 ವರ್ಷಗಳ ನಂತರ ದಳಪತಿ ವಿಜಯ್ ಗೆ ನಾಯಕಿಯಾದ ನಟಿ ತ್ರಿಷಾ….
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ತಮ್ಮ ಕೊನೆಯ ಸಿನಿಮ ವಾರೀಸು ನಂತರ ತಮ್ಮ ವೃತ್ತಿ ಜೀವನದ 67 ನೇ ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ಇದೀಗ ಮತ್ತೊಮ್ಮೆ ಮತ್ತೊಮ್ಮೆ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಬಣ್ಣ ಹಚ್ಚಲು ರೆಡಿಯಾಗುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಈ ಹಿಂದೆ ತೆರೆಕಂಡ ಮಾಸ್ಟರ್ ಸಿನಿಮಾ ಬ್ಲಾಕ್ ಬಸ್ಟರ್ ಯಶಸ್ಸು ಕಂಡಿತ್ತು.
ಚಿತ್ರದ ಮತ್ತೊಂದು ವಿಶೇಷವೆಂದರೆ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಆಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ನಾಯಕಿಯ ಬಗ್ಗೆ ಚಿತ್ರತಂಡ ಸ್ಪಷ್ಟನೆ ನೀಡಿದೆ. ನಟಿ ತ್ರಿಷಾ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.
ತ್ರಿಶಾ ಈ ಹಿಂದೆ ಹಲವು ಚಿತ್ರಗಳಲ್ಲಿ ವಿಜಯ್ ಜೊತೆ ನಟಿಸಿದ್ದಾರೆ. ಆದರೆ, ಇವರಿಬ್ಬರ ಕಾಂಬಿನೇಷನ್ ನಲ್ಲಿ ಚಿತ್ರ ಬಂದು ಸುಮಾರು 15 ವರ್ಷಗಳಾಗಿತ್ತು. ಇದೀಗ ಮತ್ತೊಮ್ಮೆ ಈ ಜೋಡಿ ನಮ್ಮ ಮುಂದೆ ಬರುತ್ತಿದ್ದು, ಈ ಸಿನಿಮಾದ ಮೇಲೆ ನಿರೀಕ್ಷೆ ಹುಟ್ಟು ಹಾಕಿದೆ.
Actress Trisha : After 15 years, actress Trisha became the heroine of thalpati Vijay.








