ಕೊರೊನಾ ವೈರಸ್ ಹರಡುವಿಕೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಸಿಐಟಿಯು ನೀಯೋಗ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಅಸಂಘಟಿತ ವಲಯದ ಆಟೋ, ಹಮಾಲಿ ಟ್ಯಾಕ್ಸಿ, ಬೀದಿ ಬದಿ, ಮನಗೆಲಸ ಬೀಡಿ,ಕಟ್ಟಡ ಹಾಗೂ ಅಂಗನವಾಡಿ, ಬಿಸಿಯೂಟ ಮೊದಲಾದ ಸ್ಕೀಂ ನೌಕರರ ಮತ್ತು ಸಂಘಟಿತ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳು ಅವರ ಬದುಕಿನ ರಕ್ಷಣೆ ಮತ್ತು ಅಗತ್ಯವಿರುವ ಪರಿಹಾರ ಕ್ರಮಗಳು ಕುರಿತು ಸರಕಾರ ಮುಂದಾಗಬೇಕೆಂದು ನಿಯೋಗ ಒತ್ತಾಯಿಸಿದೆ. ಜೊತೆಗೆ ಕಾಲ್ನಡಿಗೆಯಲ್ಲಿ ಸಾಗಿ ಹಸಿವಿನಿಂದ ಸಾವನಪ್ಪಿದ ಗಂಗಮ್ಮನ ಕುಟುಂಬಕ್ಕೆ ಕಟ್ಟಡ ಮಂಡಳಿಯಿಂದ ಕೂಡಲೇ ಪರಿಹಾರ ಘೋಷಿಸಬೇಕು ಎಂದು ಸಿಐಟಿಯು ಆಗ್ರಹಿಸಿದೆ. ನಿಯೋಗದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ರಾಜ್ಯ ಕಾರ್ಯದರ್ಶಿ ಕೆ.ಎನ್. ಉಮೇಶ್, ಕೆ.ಮಹಾಂತೇಶ ಇದ್ದರು. ಮನವಿ ಸ್ವೀಕರಿಸಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭರವಸೆ ನೀಡಿದ್ದಾರೆ.








