‘ಆಧಾರ್ ಕಾರ್ಡ್ ಇಲ್ಲ ಎಂದ ಮಾತ್ರಕ್ಕೆ ಚಿಕಿತ್ಸೆ , ಲಸಿಕೆ ನಿರಾಕರಿಸುವಂತಿಲ್ಲ’..!
ನವದೆಹಲಿ : ಕೋವಿಡ್ ಲಸಿಕೆ ಅಥವ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುವುದಕ್ಕೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ತಿಳಿಸಿದೆ. ಹೌದು.. ಇತ್ತೀಚೆಗೆ ಆಧಾರಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಲಸಿಕೆ ಹಾಕುವುದು ಹಾಗೂ ಆಸ್ಪತ್ರೆಗೆ ಸೊಂಕಿತರಗೆ ಚಿಕಿತ್ಸೆ ಕೊಡಲು ನಿರಾಕರಿಸುತ್ತಿರುವ ಪ್ರಕರಣಗಳು ಕಂಡು ಬರುತ್ತಿದೆ.. ಆದ್ರೆ ಆಧಾರ್ ಕಾರ್ಡ್ ಇಲ್ಲದ ಮಾತ್ರಕ್ಕೆ ಕೋವಿಡ್ ಚಿಕಿತ್ಸೆ, ಲಸಿಕೆ ಕೊಡುವುದನ್ನ ನಿರಾಕರಿಸುವಂತಿಲ್ಲ ಎಂದು UIDAI ಸ್ಪಷ್ಟಪಡಿಸಿದೆ.
ಆರೋಗ್ಯ ಸೇತು ಆಯಪ್ ಪ್ರಕಾರ, ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್, ಪಾಸ್‌ಪೋರ್ಟ್, ಪಿಂಚಣಿ ಪಾಸ್‌ಬುಕ್, ಎನ್‌ಪಿಆರ್ ಸ್ಮಾರ್ಟ್ ಕಾರ್ಡ್ ಅಥವಾ ಮತದಾರರ ಚೀಟಿ ಯಾವುದಾದರೊಂದನ್ನು ಬಳಸಿ ಜನರು ಹೆಸರು ನೋಂದಾಯಿಸಿಕೊಳ್ಳಬಹುದು ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.