ಪ್ರಭಾಸ್ ನಟನೆಯ ಆದಿಪುರುಷ (Adipurush Movie) ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಕುರಿತು ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ, ಈ ಸಿನಿಮಾ ಟ್ರೋಲ್ ಆಗುತ್ತಿರುವುದು ಇಡೀ ತಂಡಕ್ಕೆ ತಲೆನೋವು ತಂದಿದೆ. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಈ ತಂಡ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುತ್ತಿದೆ.
ಜೈ ಶ್ರೀರಾಮ್ (Jai Shri Ram Lyrical Motion Poster) ಎಂಬ ಲಿರಿಕಲ್ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ. ಇದು ಅಭಿಮಾನಿಗಳಿಗೆ ಇಷ್ಟವಾಗಿದೆ. ಈ ಹಾಡನ್ನು ಕೇಳಿ ಮೈ ರೋಮಾಂಚನ ಆಗುತ್ತಿದೆ ಎಂದು ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. ಸಿನಿಮಾ ಕುರಿತು ಪಾಸಿಟಿವ್ ವೈಬ್ ಸೃಷ್ಟಿ ಆಗುತ್ತಿರುವುದಕ್ಕೆ ಚಿತ್ರತಂಡಕ್ಕೆ ಖುಷಿ ಇದೆ.
ಚಿತ್ರದ ಬಜೆಟ್ ಈಗಾಗಲೇ 550 ಕೋಟಿ ರೂಪಾಯಿ ದಾಟಿದೆ. ರಾಮಾಯಣ ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ರಾಮನಾಗಿ ಪ್ರಭಾಸ್ ಕಾಣಿಸಿಕೊಂಡರೆ, ಕೃತಿ ಸನೋನ್ ಸೀತೆಯ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್ ಎಲ್ಲ ನಿರೀಕ್ಷೆಗಳನ್ನು ಹುಸಿ ಮಾಡಿತ್ತು. ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್ ಲುಕ್ ಸರಿ ಇಲ್ಲ ಎಂದು ಕೆಲವರು ಟೀಕೆ ಮಾಡಿದರೆ, ಗ್ರಾಫಿಕ್ಸ್ ಬಗ್ಗೆ ಒಂದಷ್ಟು ಜನರು ಮಾತನಾಡಿದ್ದಾರೆ. ವಾನರ ಸೇನೆಯಲ್ಲಿ ಬೇರೆ ಬೇರೆ ಪ್ರಾಣಿಗಳು ಕಾಣಿಸಿದ್ದು ಕೂಡ ಟೀಕೆಗೆ ಕಾರಣವಾಗಿದೆ. ಅಂದುಕೊಂಡಂತೆ ಆಗಿದ್ದರೆ ಜನವರಿ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸ ವಿಳಂಬ ಆದ ಕಾರಣ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ. ಜೂನ್ 16ರಂದು ‘ಆದಿಪುರುಷ್’ ಸಿನಿಮಾ ರಿಲೀಸ್ ಆಗುತ್ತಿದೆ. ನಿಧಾನವಾಗಿ ಚಿತ್ರತಂಡ ಪ್ರಚಾರದಲ್ಲಿ ಭಾಗಿ ಆಗುತ್ತಿದೆ.