ರಾಜ್ಯ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಎಬ್ಬಿಸುವಂತ ಆರೋಪಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ ರಾಜಕೀಯ ಹೊಂದಾಣಿಕೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್,ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಭಾರೀ ಅಡ್ಜಸ್ಟ್‌ಮೆಂಟ್ ರಾಜಕಾರಣ ನಡೆಯುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಲೂಟಿ ಮಾಡಬೇಕು, ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ಕುಟುಂಬ ಲೂಟಿ ಮಾಡಬೇಕು ಎಂದು ಅವರಿಬ್ಬರ ನಡುವೆ ಒಪ್ಪಂದವಾಗಿದೆ, ಎಂದು ಯತ್ನಾಳ್ ಹೇಳಿದ್ದಾರೆ.
ಸಿಗಂದೂರು ಸೇತುವೆ ವಿಚಾರದಲ್ಲಿ ಕೂಡ ಆರೋಪ:
ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ನಡೆದ ಘಟನೆಗೆ ಸಂಬಂಧಪಟ್ಟಂತೆ ಕೂಡ ಯತ್ನಾಳ್ ಟೀಕಿಸಿದ್ದಾರೆ. ಶಿಷ್ಟಾಚಾರ ಪಾಲನೆ ಅನ್ನೋದು ಕೇವಲ ನೆಪ. ಸಿಎಂಗೆ ನೀವೂ ಬರಬೇಡಿ, ನಿಮ್ಮವರೂ ಬರಬೇಡಿ ಅಂತ ಯಡಿಯೂರಪ್ಪ ಹೇಳಿದ್ದು, ಈ ಮೂಲಕ ತಮ್ಮ ಹಾಗೂ ಸಿದ್ದರಾಮಯ್ಯ ನಡುವೆ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರಿಸಿಕೊಳ್ಳೋದು ಯಡಿಯೂರಪ್ಪ ಉದ್ದೇಶ ಆಗಿತ್ತು ಎಂದು ಯತ್ನಾಳ್ ಆರೋಪಿಸಿದ್ದಾರೆ.
ಯತ್ನಾಳ್ ನೀಡಿರುವ ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ..








