ಬೆಂಗಳೂರು : ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ವಿಧೇಯಕ ಅಂಗೀಕಾರಕ್ಕೂ ಮೊದಲು ಅದರ ಮೇಲೆ ಸುದೀರ್ಘ ಚರ್ಚೆ ನಡೆಯಿತು. ಕೊನೆಗೆ ಸರ್ಕಾರ ಒಂದಿಷ್ಟು ತಿದ್ದುಪಡಿಗಳಿಗೆ ಒಪ್ಪಿತು.
ಸದ್ಯ ಅಂಗೀಕಾರವಾಗಿರುವ ವಿಧೇಯಕದ ಪ್ರಕಾರ, ಇನ್ಮುಂದೆ ಯಾರು ಬೇಕಾದರೂ ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ. ಇಲ್ಲಿಯವಗೆರೆ ಕೃಷಿಕರು ಮಾತ್ರ ಕೃಷಿ ಭೂಮಿಯನ್ನು ಖರೀದಿಸಲು ಅವಕಾಶವಿತ್ತು.
ನೀರಾವರಿ ಪ್ರದೇಶದಲ್ಲಿ ಖರೀದಿ ಮಾಡುವ ಜಮೀನು ಕೃಷಿಗೆ ಮಾತ್ರ ಬಳಕೆಯಾಗಬೇಕು.
ಫೈನಾನ್ಶಿಯರ್ ಕಿಡ್ನಾಪ್ ಪ್ರಕರಣದಲ್ಲಿ ಸುನಾಮಿ ಕಿಟ್ಟಿ..!
5 ಜನರಿರುವ ಒಂದು ಕುಟುಂಬ ಗರಿಷ್ಠ 54 ಎಕರೆ ಕೃಷಿ ಜಮೀನು ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ಜೊತೆಗೆ 5ಕ್ಕಿಂತ ಹೆಚ್ಚು ಇರುವ ಕುಟುಂಬ ಗರಿಷ್ಠ 108 ಎಕರೆ ಜಮೀನು ಖರೀದಿಗೆ ಅವಕಾಶವಿದೆ.
ಕೃಷಿ ಜಮೀನು ಖರೀದಿಸಲು ಈ ಹಿಂದೆ ಇದ್ದ 25 ಲಕ್ಷ ರೂ ವಾರ್ಷಿಕ ಆದಾಯ ಮಿತಿ ರದ್ದು ಮಾಡಲಾಗಿದೆ.