ನವದೆಹಲಿ : ಭಾರತದಲ್ಲಿ ಕೊರೊನಾಸುರನ ಅಟ್ಟಹಾಸ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 55 ಸಾವಿರದ 079 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 16 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಾರ ದೇಶದಲ್ಲಿ ಸದ್ಯ ಸೋಂಕಿತರ ಸಂಖ್ಯೆ 16 ಲಕ್ಷದ 38 ಸಾವಿರದ 871 ಆಗಿದೆ. ಅವರಲ್ಲಿ 5 ಲಕ್ಷದ 45 ಸಾವಿರದ 318 ಸಕ್ರಿಯ ಕೇಸುಗಳಾಗಿವೆ. ಒಟ್ಟು 10 ಲಕ್ಷದ 57 ಸಾವಿರದ 806 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಯಲ್ಲಿ 779 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 35,747ಕ್ಕೇರಿದೆ.