ಏರೋ ಇಂಡಿಯಾ 2021 | ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ವೈಮಾನಿಕ ಪ್ರದರ್ಶನ
ಬೆಂಗಳೂರು : ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರ್ ಶೋ ಆರಂಭವಾಗಿದೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಂತೆ ಬಾನಂಗಳದಲ್ಲಿ ರಾಷ್ಟ್ರಧ್ವಜ, ಭಾರತೀಯ ವಾಯುಪಡೆಯ ಧ್ವಜ ಹಾಗೂ ಏರೋ ಇಂಡಿಯ-2021ರ ಬಾವುಟಗಳನ್ನು ಹೊತ್ತು ಮೂರು ಎಂಐ-17 ಹೆಲಿಕಾಪ್ಟರ್ ಗಳು ಸಾಗಿಬರುವ ಮೂಲಕ, ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆರಂಭಗೊಂಡಿತು.
ಇಂದಿನಿಂದ 7ರವರೆಗೆ ಐದು ದಿನಗಳ ಕಾಲ ಏರ್ ಶೋ ನಡೆಯಲಿದ್ದು, ಇದು ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ವೈಮಾನಿಕ ಪ್ರದರ್ಶನವಾಗಲಿದೆ.
ಈ ಬಾರಿ ಇದೇ ಮೊದಲ ಬಾರಿಗೆ ಸೂರ್ಯ ಕಿರಣ್ ಹಾಗೂ ಸಾರಂಗ್ ವೈಮಾನಿಕ ಪ್ರದರ್ಶನ ತಂಡಗಳು ಜಂಟಿ ಪ್ರದರ್ಶನ ನೀಡಲಿವೆ.
ಇವುಗಳ ಜೊತೆಗೆ ‘ಚಿನೂಕ್ ಟ್ವಿನ್ ಎಂಜಿನ್’ ಹೆಲಿಕಾಪ್ಟರ್ ವೈಮಾನಿಕ ಪ್ರದರ್ಶನದಲ್ಲಿ ಭಾಗವಹಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ.
ಇನ್ನು ಈ ಬಾರಿ ಪ್ರತ್ಯಕ್ಷ ಹಾಗೂ ವರ್ಚುಯಲ್ ಎರಡೂ ಮಾದರಿ ಏರೋ ಇಂಡಿಯಾ ಶೋ ನಡೆಯಲಿದೆ. ಈ ಏರ್ ಶೋನಲ್ಲಿ ಭಾರತ ಸೇರಿದಂತೆ ಇನ್ನಿತರ ದೇಶಗಳ 63 ವಿಮಾನಗಳು ಪ್ರದರ್ಶನಗೊಳ್ಳಲಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
42 ವಿಮಾನಗಳು ದಿನದಲ್ಲಿ 7 ಬಾರಿ ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ. ಡಕೋಟಾ, ಸುಖೋಯ್, ರಫೆಲ್, ಎಲ್ ಸಿ ಹೆಚ್, ಎಲ್ ಯು ಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









