ಅಫ್ಘಾನಿಸ್ತಾನ: ಭಾರತದ ರಾಯಭಾರ ಕಚೇರಿ ಮೇಲೆ ತಾಲೀಬಾನಿಗಳ ದಾಳಿ
ಸ್ಮಶಾಣದಂತಾಗಿರುವ ಅಫ್ಘಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್ ರಾಕ್ಷಸರ ಕೈ ಕೆಳಗೆ ಸಿಲುಕಿ ಜನರು ಕ್ಷಣಕ್ಷಣಕ್ಕೂ ಸಾಯುವಂತಾಗಿದೆ. ಈ ನಡುವೆ ಅಮೆರಿಕಾ ಬಾರತ ತನ್ನ ದೇಶದ ನಾಗಗರಿಕರನ್ನ ಸುರಕ್ಷಿತವಾಗಿ ದೇಶಗಳಿಗೆ ವಾಪಸ್ ಕರೆಸಿಕೊಂಡಿದೆ.. ಈ ನಡುವೆ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ಮಾಡಿರುವ ಉಗ್ರರು ಮಹತ್ವದ ದಾಖಲೆಗಳಿಗಾಗಿ ಹುಡುಕಾಡಿದ್ದಾರೆ ಎಂದು ವರದಿಯಾಗಿದೆ.
ಹೌದು ಹೇರತ್ ಮತ್ತು ಕಂದಹಾರ್ ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ದಾಳಿ ಮಾಡಿರುವ ತಾಲಿಬಾನ್ ಉಗ್ರರು ದಾಖಲೆಗಳಿಗಾಗಿ ಹುಡುಕಾಡಿದ್ದು, ರಾಯಭಾರ ಕಚೇರಿಯಲ್ಲಿದ್ದ ವಾಹನಗಳನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಅಫ್ಘಾನಿಸ್ತಾನದಲ್ಲಿ ಇನ್ನೂ 450 ಭಾರತೀಯರು ಸಿಲುಕಿಕೊಂಡಿದ್ದು ಅವರನ್ನು ಭಾರತಕ್ಕೆ ವಾಪಸ್ ಕರೆತರುವುದೇ ಈಗ ಸರ್ಕಾರಕ್ಕೆ ಸವಾಲಾಗಿದೆ. ಅಮೆರಿಕ ಮತ್ತು ಇತರೆ ರಾಯಭಾರ ಕಚೇರಿಗಳ ಮೂಲಕ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ವಿದೇಶಾಂಗ ಸಚಿವಾಲಯ ಮಾಡುತ್ತಿದೆ. ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡು 4 ದಿನವಾದ್ರೂ ಇನ್ನೂ ಅಲ್ಲಿ ಸರ್ಕಾರ ರಚನೆ ಆಗಿಲ್ಲ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಿಮಾನ ನಿಲ್ದಾಣಕ್ಕೆ ಕರೆತರುವುದೇ ಹರಸಾಹಸವಾಗಿದೆ.








