ಮಹಿಳೆಯರು ತಲೆಯಿಂದ ಕಾಲಿನವರೆಗೂ ಸಂಪೂರ್ಣ ಉಡುಪು ಧರಿಸಬೇಕು : ತಾಲಿಬಾನ್
ಕಾಬೂಲ್: ತಾಲಿಬಾನ್ ರ ಆಡಳಿತದಲ್ಲಿರುವ ಅಪಘಾನಿಸ್ತಾನದಲ್ಲಿ ಮಹಿಳೆಯರು ಸಾರ್ವಜನಿಕವಾಗಿ ತಲೆಯಿಂದ ಕಾಲಿನವರೆಗೂ ಸಂಪೂರ್ಣ ಉಡುಪುಗಳನ್ನು ಧರಿಸಬೇಕೆಂದು ಅಲ್ಲಿನ ಸರಕಾರ ಆದೇಶ ಹೊರಡಿಸಿದೆ.
ಅಪಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದಾಗಿನಿಂದಲೂ ಅಲ್ಲಿನ ನಾಗರಿಕರಿಗೆ, ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡಿರುವ ತಾಲಿಬಾನ್ ಜನರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ.
ತಾಲಿಬಾನ್ ಇತ್ತೀಚೆಗೆ ಹೊರಡಿಸಿರುವ ಆದೇಶಗಳಲ್ಲಿ ಮುಖ್ಯವಾಗಿ ಮಹಿಳೆಯರ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಇತ್ತೀಚೆಗೆ ತಾಲಿಬಾನ್ ಮಹಿಳೆಯರಿಗೆ ಒಂಟಿಯಾಗಿ ಪ್ರಯಾಣಿಸುವುದನ್ನು ನಿಷೇಧಿಸಿತ್ತು. ಆದರೆ ಈ ಕಾನೂನಿಗೆ ಪ್ರಜೆಗಳು ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಮೌನವಾಗಿ ಕಾನೂನನ್ನು ನಿರ್ಲಕ್ಷಿಸಲಾಗಿದೆ.
ತಾಲಿಬಾನ್ನ ಇತ್ತೀಚೆಗೆ ಕಾಬೂಲ್ ಹಾಗೂ ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್(ವಾಹನ ಪರವಾನಗಿ) ನೀಡುವುದನ್ನೂ ನಿಲ್ಲಿಸಿದೆ. ಅಫ್ಘಾನಿಸ್ತಾನದಲ್ಲಿ ಆಹಾರ ಹಾಗೂ ಅಗತ್ಯ ವಸ್ತುಗಳ ಸರಬರಾಜಿನ ತೀವ್ರ ಕೊರತೆ ಉಂಟಾಗಿದೆ. ದೇಶ ವಿನಾಶಕಾರಿ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿರುವ ನಡುವೆಯೂ ಹಲವಾರು ನಿಷೇಧಗಳನ್ನು ಹೇರುತ್ತಿದೆ.