ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಗಳ ಗೂಂಡಾಗಿರಿ – ಪೊಲೀಸರಿಂದ ಲಾಠಿ ಚಾರ್ಜ್
ಮಾದಕ ವಸ್ತು ಸಾಗಿಸುತ್ತಿದ್ದ ಆರೋಪದ ಮೇಲೆ ಜಾನ್ ಎಂಬ ಆಫ್ರಿಕನ್ ಪ್ರಜೆಯನ್ನ ಜೆಸಿ ನಗರ ಪೊಲೀಸರು ಬಂಧಿಸಿದ್ದರು.. ಆದ್ರೆ ಇಂದು ಆತನ ಎದೆನೋವು ಕಾಣಿಸಿಕೊಂಡು ಸಾವನಪ್ಪಿದ್ದಾನೆ.. ಇದಾದ ನಂತರ ಆತನ ಸ್ನೇಹಿತರು ಜೆ ಸಿ ನಗರ ಪಲೀಸ್ ಠಾಣೆ ವಿರುದ್ಧ , ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ..
ಇಂದು ಮುಂಜಾನೆ ಆತನಿಗೆ ಎದೆನೋವು ಕಾಣಿಸಿಕೊಂಡಿತು, ತಕ್ಷಣ ಆತನನ್ನ ಆಸ್ಪತ್ರೆಗೆ ದಾಖಲು ಮಾಡಿದಾಗ ತೀವ್ರ ಹೃದಯಾಘಾತ ಸಂಭವಿಸಿ ಆತ ಮೃತಪಟ್ಟಿದ್ದ.
ಇದರಿಂದಾಗಿ ಆತನ ಸ್ನೇಹಿತರು ಹಾಗೂ ಕೆಲ ಆಫ್ರಿಕಾ ಪ್ರಜೆಗಳು ಜೆಸಿ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಇದು ಹಿಂಸಾಚಾರಕ್ಕೆ ತಿರುಗಿ ಕೆಲವು ಪೊಲೀಸರ ಮೇಲೆ ಆಫ್ರಿಕಾ ಪ್ರಜೆಗಳು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಾಟೆ ಮಾಡಿ ಪೊಲೀಸರ ಮೇಲೆಯೇ ಹಲ್ಲೆಗೆ ಮಾಡಿದವರನ್ನ ಬಂಧಿಸಲಾಗುವುದು ಎಂದು ಡಿಸಿಪಿ ಮೀನಾ ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಹೆಚ್ಚುತ್ತಿದೆ ಕರಿಮಾರಿ ಹಾವಳಿ : ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3703ಕ್ಕೆ ಏರಿಕೆ








