ಬೆಂಗಳೂರು: ರಾಜ್ಯದಲ್ಲಿ ಡಿಗ್ರಿ ಕಾಲೇಜುಗಳನ್ನು ರಾಜ್ಯ ಸರ್ಕಾರ ಆರಂಭಿಸಿ ಒಂದು ವಾರವಷ್ಟೇ ಆಗಿದೆ. ಈಗ ಶಾಲಾ-ಕಾಲೇಜುಗಳನ್ನು ಪುನಾರಂಭಿಸಲು ಸಿದ್ಧತೆ ಆರಂಭಿಸಿದೆ.
ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಪೋಷಕರು, ಖಾಸಗಿ ಶಾಲೆಗಳ ಸಂಘಟನೆಗಳು, ಖಾಸಗಿ ಶಾಲೆಗಳ ಮುಖ್ಯಸ್ಥರು, ಡಿಡಿಪಿಇ, ಎಸ್‍ಡಿಎಂಸಿ ಅಧ್ಯಕ್ಷರ ಜತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾ ಸಲಭೆ, ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ದಪಡಿಸಿದ್ದಾರೆ.
ಅನ್ಬುಕುಮಾರ್ ವರದಿಯ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚೆ ನಡೆಸಿ ಶಾಲೆಗಳನ್ನು ಆರಂಭಿಸಬೇಕೋ? ಬೇಡವೋ ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಡಿಸೆಂಬರ್ ಎರಡನೇ ವಾರದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಅನ್ಬುಕುಮಾರ್ ತಮ್ಮ ವರದಿಯಲ್ಲಿ ಶಿಫಾರಸು ಮಾಡಿದ್ದಾರೆ. ಹೀಗಾಗಿ ಈ ವರದಿಯ ಸಾಧಕ-ಬಾಧಕಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮೂಲಗಳ ಪ್ರಕಾರ ನಾಳೆಯ ಸಭೆಯಲ್ಲಿ ಬಹುತೇಕ 9, 10ನೇ ತರಗತಿ ಶಾಲೆಗಳು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ತರಗತಿಯ ಪಿಯು ಕಾಲೇಜುಗಳನ್ನು ಆರಂಭಿಸಲು ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ.
ಕೊರೊನಾ 2ನೇ ಅಲೆ ಭೀತಿ..!
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು, ರಾತ್ರಿ ಕಫ್ರ್ಯೂ ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ ಡಿಸೆಂಬರ್ 31ರವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸದಂತೆ ನಿರ್ಬಂಧ ಹೇರಿವೆ.
ಆದರೆ, ಕರ್ನಾಟಕದಲ್ಲಿ ಪದವಿ ಅಂತಿಮ ವರ್ಷದ ತರಗತಿಗಳು ಆರಂಭವಾಗಿರುವುದನ್ನೇ ಮಾದರಿಯಾಗಿಟ್ಟುಕೊಂಡು ಶಾಲೆ-ಪಿಯು ಕಾಲೇಜುಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ.
ಈಗಾಗಲೇ ಡಿಗ್ರಿ ಫೈನಲ್ ವಿದ್ಯಾರ್ಥಿಗಳಿಗೆ ನಡೆಸಿದ ಪರೀಕ್ಷೆಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಬಹುತೇಕ ಪದವಿ ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ತರಗತಿಯೇ ಸಾಕು ಎನ್ನುತ್ತಿದ್ದಾರೆ.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜ್ಯದಲ್ಲೂ ಕೊರೊನಾ 2ನೇ ಅಲೆ ಬರುವುದು ಬಹಳ ದಿನ ಇಲ್ಲ ಎಂದಿದ್ದಾರೆ. ಕೊರೊನಾ ಭೀತಿಯ ನಡುವೆಯೂ ಸರ್ಕಾರ ಶಾಲೆಗಳನ್ನು ಆರಂಭ ಮಾಡಲು ಗ್ರೀನ್ ಸಿಗ್ನಲ್ ಕೊಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel