ಕೋಲಾರ: ಇತ್ತೀಚೆಗಷ್ಟೇ ಉಡುಪಿಯಲ್ಲಿ ಭೀಕರ ಗ್ಯಾಂಗ್ ವಾರ್ ನಡೆದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈಗ ಜಿಲ್ಲೆಯಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಪಿಚ್ಚಗುಂಟ್ಲಹಳ್ಳಿಯಲ್ಲಿ ಯುವಕನೊಬ್ಬ ಮಾರಕಾಸ್ತ್ರ(Weapon) ಬಳಸಿ ಜನರಲ್ಲಿ ಆತಂಕ ಮೂಡಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು 27 ವರ್ಷದ ಸಂದೀಪ್ ಎಂಬಾತನನ್ನು ಬಂಧಿಸಿದ್ದಾರೆ.
ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ, ಜನರ ನೆಮ್ಮದಿಗೆ ಭಂಗ ತರುವ ಮತ್ತು ಗಲಭೆ ಸೃಷ್ಟಿ ಮಾಡುವ ಉದ್ದೇಶದಿಂದ ಸಂದೀಪ್ ಲಾಂಗ್ ಹಿಡಿದು ಪೋಸ್ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಇತ್ತೀಚೆಗಷ್ಟೇ ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ಗ್ಯಾಂಗ್ ಗಳ ಮಧ್ಯೆ ಭೀಕರ ಕಾಳಗ ನಡೆದಿತ್ತು. ಘಟನೆಯ ವಿಡಿಯೋ ವೈರಲ್ ಆಗಿದವು. ಇಂತಹ ವಿಡಿಯೋಗಳಿಂದ ಪ್ರಚೋದನೆ ಪಡೆದು ರಾಜ್ಯದ ಇತರ ಕಡೆಗಳಲ್ಲಿಯೂ ಯುವಕರು ಇಂಥ ಕೃತ್ಯಕ್ಕೆ ಇಳಿಯುತ್ತಿರುವುದು ಜನರ ಆತಂಕಕ್ಕೆ ಕಾರಣವಾಗುತ್ತಿವೆ.