ಬೀದರ್: ಕಣ್ಣಿಗೆ ಖಾರದ ಪುಡಿ ಎರಚಿ ಹಾಡಗಲೇ ಬೀದರ್‌ನಲ್ಲಿ (Bidar) ಫಿಲ್ಮ್ ಸ್ಟೈಲ್ ನಲ್ಲಿ 63 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಕಣ್ಣಿಗೆ ಖಾರದ ಪುಡಿ ಎರಚಿ ಹಣದೊಂದಿಗೆ ಇಬ್ಬರು ದರೋಡೆಕೋರರು ಪರಾರಿಯಾಗಿದ್ದಾರೆ. ಅಲ್ಲದೇ, ಸಿಬ್ಬಂದಿ ಮೇಲೆ ಫೈರಿಂಗ್ ಮಾಡಿದ್ದರಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸಿಎಂಎಸ್ ಸಂಸ್ಥೆ ಎಸ್‌ಬಿಐ ಬ್ಯಾಂಕ್‌ನ ಎಟಿಎಂಗೆ ಹಣ ತುಂಬಲು ಬಂದಾಗ ದರೋಡೆ ನಡೆದಿದೆ
ಯಾವುದೇ ಎಟಿಎಂನಲ್ಲಿ (ATM) ಹಣ ತುಂಬುವಾಗ ಗನ್‌ಮ್ಯಾನ್ ಕಡ್ಡಾಯವಾಗಿ ಇರಲೇಬೇಕು. ಆದರೆ ಇಲ್ಲಿ ಗನ್‌ಮ್ಯಾನ್ ಇಲ್ಲದೇ ಹಣ ತುಂಬಲು ಬಂದಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶವಗಳನ್ನು ಬ್ರಿಮ್ಸ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.