ಬೆಂಗಳೂರು: ಜಿಪಂ ಸದಸ್ಯೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ.
ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ನನ್ನು ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್ಐಟಿ ದೋಷಾರೋಪಪಟ್ಟಿ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ. ಈಗಾಗಲೇ ಇನ್ನುಳಿದ ಮೂರು ಪ್ರಕರಣಗಳ ಅರ್ಜಿಗಳು ಕೂಡ ವಜಾಗೊಂಡಿವೆ.