Agneepath scheme | ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ

1 min read
Agneepath scheme 10-reservation-for-agniveers saaksha tv

Agneepath scheme 10-reservation-for-agniveers saaksha tv

Agneepath scheme | ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ

ನವದೆಹಲಿ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ದೇಶದಾದ್ಯಂತ ಅಗ್ನಿಪಥ್ ಯೋಜನೆ ವಿರೋಧಿಸಿ ಯುವಕರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ಅಗ್ನಿ ಪಥ್ ಪ್ರತಿಭಟನೆ ಕಾವು ಜೋರಾಗಿದೆ.  

ನಡುವೆ ಯೋಜನೆ ಸಂಬಂಧ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಅಗ್ನಿವೀರರಿಗೆ 10% ಮೀಸಲಾತಿ ನೀಡಿದ್ದು, CAPF ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು  ಟ್ವೀಟ್ಮಾಡಿದೆ.

ಜೊತೆಗೆ ಎರಡು ಪಡೆಗಳ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 3 ವರ್ಷಕ್ಕೆ ಸಡಿಲಿಕೆ ಮಾಡಿದೆ.

Agneepath scheme 10-reservation-for-agniveers saaksha tv
Agneepath scheme 10-reservation-for-agniveers saaksha tv

ಆ ಮೂಲಕ ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ಸಡಿಲಿಸಿದೆ.

ಅಂದಹಾಗೆ ಅಗ್ನಿಪಥ್ ಯೋಜನೆ ವಿಚಾರವಾಗಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ.

ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಹಿಂದೆ ಹೇಳಿದ್ದೆ.

ಈಗಲೂ ಪ್ರಧಾನಿ ನರೇಂದ್ರ ಮೋದಿಮಾಫಿವೀರ್ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು.

ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd