ಬಂಧನದ ಭೀತಿಯಲ್ಲಿ ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ..
ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದೆ.. ಈತ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.. ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ..
ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಅಗ್ನಿಪಥ್ ಪ್ರತಿಭಟನೆಯಲ್ಲಿ ಈತ ಭಾಗವಹಿಸಿದ್ದು , ಬಂಧನದ ಭೀತಿಯಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಪೋಷಕರು ತಿಳಿಸಿದ್ಧಾರೆ..
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.