ಬೆಂಗಳೂರು: ಬಿಎಸ್ಸಿ ಅಗ್ರಿಕಲ್ಚರ್ ಹಾಗೂ ಬಿಟೆಕ್ ಇಂಜಿನಿಯರಿಂಗ್ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಎಲ್ಲಾ ಬಿಎಸ್ಸಿ ಅಂತಿಮ ಪದವಿ ಪರೀಕ್ಷೆಗಳು ಈಗಾಗಲೇ ಅನ್‍ಲೈನ್‍ನಲ್ಲಿ ಜುಲೈ8ರೊಳಗೆ ಮುಗಿಸಲಾಗಿದೆ. ಜುಲೈ ಅಂತ್ಯದೊಳಗೆ ಬಿಎಸ್ಸಿ ಅಗ್ರಿ ಡಿಗ್ರಿ ಪ್ರಮಾಣಪತ್ರ ಮತ್ತು ಅಂಕಪಟ್ಟಿ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಆರಂಭವಾಗುವ ಹೊತ್ತಿಗೆ 90%
ಹೆಚ್‍ಓಟಿ(ಹ್ಯಾಂಡ್ಸ್ ಆನ್ ಟ್ರೈನಿಂಗ್ ಅಥವಾ ರೂರಲ್ ಎಕ್ಸ್ಟೆನ್ಷನ್ ಅಗ್ರಿಕಲ್ಚರ್ ಡೆವಲಪ್ಮೆಂಟ್ ಯೋಜನೆ) ಪ್ರಕಾರ ತರಗತಿಗಳು ಮುಗಿದಿತ್ತು. ಗ್ರೂಪ್ ಡಿಸ್ಕಷನ್, ವರದಿ ಸಲ್ಲಿಕೆ ಬಾಕಿಯಿತ್ತು. ಈಗ ವಿದ್ಯಾರ್ಥಿಗಳನ್ನು ಸಾಮೂಹಿಕ ಚರ್ಚೆ ವರದಿ ಸಲ್ಲಿಕೆಗೆ ಸೇರಿಸಲು ಕೋವಿಡ್ ನಿಂದ ಸಾಧ್ಯವಾಗದ ಕಾರಣ ಶಿಕ್ಷಕರು ಈಗಾಗಲೇ ಆನ್‍ಲೈನ್ ಮೂಲಕ ಪರೀಕ್ಷೆಗಳನ್ನು ಮುಗಿಸಿದ್ದಾರೆ.
ಗ್ರೇಡ್ ಅಂತಿಮಗೊಳಿಸಿ ಪರೀಕ್ಷಾ ಘಟಕಕ್ಕೆ ಜು.15ರೊಳಗೆ ಸಲ್ಲಿಸಬೇಕಿದ್ದು ಪ್ರಾವಿಜನಲ್ ಡಿಗ್ರಿ ಸರ್ಟಿಫಿಕೇಟ್ ಮತ್ತು ಅಂಕಪಟ್ಟಿ ಸಲ್ಲಿಕೆ ಜು. 15ರ ಬಳಿಕ ಆರಂಭವಾಗಲಿದೆ. ಬಹುತೇಕ ಜುಲೈ ಅಂತ್ಯದೊಳಗೆ ಎಲ್ಲಾ ವಿದ್ಯಾರ್ಥಿಗಳಿಗೆ ಡಿಗ್ರಿ ಅಂಕಪಟ್ಟಿ ನೀಡಲಾಗುವುದು. ಅಂತಿಮ ವರ್ಷದ ಎಂಎಸ್ಸಿ ಹಾಗೂ ಪಿಹೆಚ್‍ಡಿ ಪದವಿ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಸೆಪ್ಟೆಂಬರ್ 15 ರಿಂದ ಫಲಿತಾಂಶ ಮತ್ತು ಪ್ರಮಾಣಪತ್ರ ಸಲ್ಲಿಕೆ ಆರಂಭವಾಗಲಿದ್ದು ಸೆಪ್ಟೆಂಬರ್ 30ರೊಳಗೆ ಎಲ್ಲಾ ಎಂಎಸ್ಸಿ, ಪಿಹೆಚ್‍ಡಿ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಬಹುದಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...








