ಬೆಂಗಳೂರು : ವಿವಾಧಿತ ಕೃಷಿ ಸುಧಾರಣಾ ಮಸೂದೆ ಜಾರಿ ವಿಚಾರವಾಗಿ ಸಚಿವ ಸಿ.ಟಿ ರವಿ ‘ಕಾಂಗ್ರೆಸ್ ಬಹಿರಂಗ ಚರ್ಚೆಗೆ ಬರಲಿ’ ಎಂದು ಸವಾಲ್ ಹಾಕಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಸಿ.ಟಿ.ರವಿ, ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಮಸೂದೆ ಜಾರಿಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ.
ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದಿಸಲಾದ ಈ ಮಸೂದೆಗಳ ಬಗ್ಗೆ ಯಾವುದೇ ಗೊಂದಲ ಬೇಡ. ಪ್ರತಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ರವಿ, ಕಾಂಗ್ರೆಸ್ ನ ಅಪಪ್ರಚಾರಕ್ಕೆ ಹೆಚ್ಚು ಆಯಸ್ಸು ಇಲ್ಲ. ಸದ್ಯದಲ್ಲಿಯೇ ರೈತರಿಗೆ ಇದರ ಅನುಕೂಲಗಳ ಅರಿವಾಗುತ್ತದೆ.
ಮಸೂದೆ ಜಾರಿಯಾದರೆ ಯಾರಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಕುರಿತು ಸಾರ್ವಜನಿಕ ಚರ್ಚೆಗೆ ಕಾಂಗ್ರೆಸ್ ನಾಯಕರು ಬರಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೆ ಮಸೂದೆ ಬಗ್ಗೆ ಕಾಂಗ್ರೆಸ್ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪರ ಇದ್ದಿದ್ದರಿಂದಲೇ ದೇಶದ ಅನ್ನದಾತನಿಗೆ ಹಲವಾರು ಜನಪರ ವಾದ ಯೋಜನೆಗಳನ್ನು ಜಾರಿ ಮಾಡಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಕೇಂದ್ರ ಸರ್ಕಾರ 6 ಸಾವಿರ ಹಾಗೂ ರಾಜ್ಯ ಸರ್ಕಾರ 4 ಸಾವಿರ ಸೇರಿದಂತೆ ಒಟ್ಟು 10 ಸಾವಿರ ರೂ.ಆರ್ಥಿಕ ನೆರವು ನೀಡುತ್ತಿದೆ.
ಇದು ರೈತ ವಿರೋಧಿ ಸರ್ಕಾರ ಹೇಗಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.








