ಕೃಷಿ ಮಸೂದೆಗಳು ರೈತರಿಗೆ ವಿರುದ್ಧವಾಗಿಲ್ಲ – ಪ್ರಧಾನಿ ಮೋದಿ
ಹೊಸದಿಲ್ಲಿ, ಸೆಪ್ಟೆಂಬರ್21: ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ ಮಸೂದೆಗಳು ರೈತರಿಗೆ ವಿರುದ್ಧವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಬಿಹಾರದಲ್ಲಿ 14,258 ಕೋಟಿ ರೂ.ಗಳ ಒಂಬತ್ತು ಹೆದ್ದಾರಿ ಯೋಜನೆಗಳಿಗೆ ಅಡಿಪಾಯ ಹಾಕಿದ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿ ಸುಧಾರಣಾ ಮಸೂದೆಗಳು 21 ನೇ ಶತಮಾನದ ಭಾರತದ ಅವಶ್ಯಕತೆ ಎಂದು ಹೇಳಿದರು.
ತಮ್ಮ ಸರ್ಕಾರವು ಕೃಷಿ ಸುಗ್ರೀವಾಜ್ಞೆಗಳನ್ನು ತಂದ ನಂತರ ಹಲವಾರು ರಾಜ್ಯಗಳಲ್ಲಿ ರೈತರು ಈಗಾಗಲೇ ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಕನಿಷ್ಠ ಬೆಂಬಲ ಬೆಲೆ, ಅವರ ಉತ್ಪನ್ನಗಳ ಸರ್ಕಾರದ ಖರೀದಿ ಮುಂದುವರಿಯುತ್ತದೆ ಎಂದು ನಾನು ರೈತರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಪ್ರಧಾನಿ ಹೇಳಿದರು. ಕೊರೋನವೈರಸ್ ಸಾಂಕ್ರಾಮಿಕದ ಮಧ್ಯೆ, ಸರ್ಕಾರ ಕೃಷಿ ಉತ್ಪನ್ನಗಳನ್ನು ಖರೀದಿಸಿ, ರೈತರಿಗೆ ದಾಖಲೆಯ ಮೊತ್ತವನ್ನು ಪಾವತಿಸಲಾಗಿದೆ ಎಂದು ಅವರು ಹೇಳಿದರು.
https://twitter.com/narendramodi/status/1307620437447208960?s=19








