ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟದ ಜೊತೆ ಸಿರಿಧಾನ್ಯ –ಬಿ ಸಿ ಪಾಟಿಲ್
ಎರಡು ವರ್ಷಗಳ ನಂತರ ಶಾಲೆಗಳು ಮತ್ತೆ ಓಪನ್ ಆಗಿವೆ…ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿವೆ.ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಬಿಸಿಯೂಟದಲ್ಲಿ ಸಿರಿಧಾನ್ಯ ನೀಡುವ ಕುರಿತಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಮಠದಲ್ಲಿ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಸಚಿವರು ಬಿಸಿಯೂಟದಲ್ಲಿ ಸಿರಿಧಾನ್ಯ ನೀಡುವುದರಿಂದ ಮಕ್ಕಳಿಗೆ ಅನುಕೂಲವಾಗುವುದು ಮಾತ್ರವಲ್ಲದೆ, ಸಿರಿ ಧಾನ್ಯ ಬೆಳೆಯಲು ರೈತರಿಗೂ ಪ್ರೋತ್ಸಾಹ ನೀಡದಂತಾಗುತ್ತದೆ ಅಂದರು.
ಇದರ ಜೊತೆಗೆ ಕೇಂದ್ರ ಸರಕಾರ ಸಾಮಾನ್ಯ ಅಕ್ಕಿಯ ಬದಲಾಗಿ ಸಾರವರಧಿತ ಅಕ್ಕಿಯನ್ನ ಬಿಸಿಯೂಟ ಯೋಜನೆಗೆ ನೀಡಲು ನಿರ್ಧರಿಸಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಆರೋಗ್ಯಕ್ಕಾಗಿ ಮಧ್ಯಾಹ್ನದ ಊಟದ ಯೋಜನೆಯಡಿಯಲ್ಲಿ ಸಾರವರ್ಧಿತ ಅಕ್ಕಿ (‘Fortified rice’)ನೀಡುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.
ಊಟಕ್ಕಾಗಿ ಬಳಕೆ ಮಾಡುವ ಅಕ್ಕಿಯ ಸಾಕಷ್ಟು ದಾಸ್ತಾನು ಇದ್ದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ ಅಕ್ಕಿ (‘Fortified rice’) ಯನ್ನು ಬಳಸಲು ಕೇಂದ್ರ ಸರ್ಕಾರ (Central government) ಹಸಿರು ನಿಶಾನೆ ತೋರಿದ್ದು, ಅದರ ಬಳಕೆಯನ್ನು ತ್ವರಿತಗೊಳಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.