ಕ್ವಾರಂಟೈನ್ ಗೆ ಒಳಗಾದ ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು, ಜುಲೈ 13: ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೊರೋನಾ ಭೀತಿಯ ಹಿನ್ನಲೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಬಿಸಿ ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರು ಮತ್ತು ಅವರ ಕುಟುಂಬ ಸದಸ್ಯರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಸಚಿವರು ತಮ್ಮ ಕ್ಷೇತ್ರವಾದ ಹಿರೇಕೇರೂರಿನ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದರೆ, ಅವರ ಕುಟುಂಬ ಸದಸ್ಯರು ಬೆಂಗಳೂರಿನ ನಿವಾಸದಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಬಗ್ಗೆ ಸಚಿವ ಬಿಸಿ ಪಾಟೀಲ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಮಾಹಿತಿ ನೀಡಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿ.ಸಿ.ಪಾಟೀಲ್
ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ