ಡಿ.ಜೆ.ಹಳ್ಳಿ ಘಟನೆ ಖಂಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಆ.12: ಪುಲಕೇಶಿ ನಗರ ಮತಕ್ಷೇತ್ರದ ಕೆ.ಜಿ.ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಖಂಡಿಸಿದ್ದಾರೆ.
ಮಂಗಳವಾರ ರಾತ್ರಿ ಡಿ.ಜೆ.ಹಳ್ಳಿಯಲ್ಲಿ ನಡೆದ ರಾದ್ಧಾಂತ ಅಸಹನೀಯ. ಅಲ್ಲದೇ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿರುವುದು ಹಾಗೂ ಗಲಭೆ ನಿಯಂತ್ರಿಸಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿರುವುದು ಅಮಾನವೀಯ. ಇಂತಹ ದುಷ್ಕೃತ್ಯವೆಸಗಿ ಗಲಭೆಗೆ ಕಾರಣರಾಗಿರುವ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದು ಕೃಷಿ ಸಚಿವರು ಹೇಳಿದ್ದಾರೆ.