ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

admin by admin
August 10, 2020
in Newsbeat, Samagra karnataka, ರಾಜ್ಯ
Minister b.c.patil
Share on FacebookShare on TwitterShare on WhatsappShare on Telegram

ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು,ಆ.10: ರಸಗೊಬ್ಬರ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಯಾವುದೇ ಕಾರಣಕ್ಕೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದಲ್ಲಿ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.
ಇಲಾಖೆಯ ನಿಯಮಾನುಸಾರವೇ ರಸಗೊಬ್ಬರವನ್ನು ರೈತರಿಗೆ ವಿತರಿಸಬೇಕು. ರೈತಬಾಂಧವರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ. ರಸಗೊಬ್ಬರಕ್ಕೆ ಯಾವುದೇ ಕೊರತೆಯಿರುವುದಿಲ್ಲ. ಅಗತ್ಯಕ್ಕನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದ್ದು , ರೈತ ಬಾಂಧವರು ಯಾವುದೇ ಇಲ್ಲಸಲ್ಲದ ವದಂತಿಗಾಗಲೀ ಸುಳ್ಳು ಸುದ್ದಿಗಾಗಲೀ ಗಮನ ನೀಡದೇ ತಾಳ್ಮೆ ವಹಿಸಿ ರೈತಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ರಸಗೊಬ್ಬರ ಖರೀದಿಸುವಂತೆ ಸಚಿವರು ಮನವಿ ಮಾಡಿದ್ದಾರೆ.
ಕೆಲವೆಡೆ ಕೆಲ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಅಂತಹವರನ್ನು ಗುರುತಿಸಿ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಬಿ.ಸಿ.ಪಾಟೀಲರು ಮತ್ತೊಮ್ಮೆ ಎಚ್ಚರಿಸಿದ್ದಾರೆ.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಇದೂವರೆಗೂ 57.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 8.51 ಲಕ್ಷ ಹೆಕ್ಟೇರ್ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಬಾರಿ ಕಳೆದ 5 ವರ್ಷಗಳ ಸರಾಸರಿ ಬಿತ್ತನೆಯ ಶೇ.14 ರಷ್ಟು ಹೆಚ್ಚಿನ ಬಿತ್ತನೆಯಾಗಿದೆ. ಈ ಬಾರಿ ಹೆಚ್ಚಿನ ಬಿತ್ತನೆಯಾಗಿರುವುದರಿಂದ ಹೆಚ್ಚಿನ ಕೃಷಿ ಪರಿಕರಗಳ ಅವಶ್ಯಕತೆಯಿರುತ್ತದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ರಸಗೊಬ್ಬರಗಳನ್ನು ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿದ್ದು, ಕಳೆದೆರಡು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಹೆಚ್ಚಿನದಾಗಿ ರಸಗೊಬ್ಬರ ಸರಬರಾಜಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.
ಜುಲೈ ತಿಂಗಳಿನಲ್ಲಿ ಮಂಗಳೂರು ಬಂದರಿಗೆ ಆಗಮಿಸಬೇಕಿದ್ದ ಹಡಗು ಸಕಾಲಕ್ಕೆ ಬಾರದಿರುವುದರಿಂದ ಯೂರಿಯಾ ರಸಗೊಬ್ಬರ ಸರಬರಾಜು ಜುಲೈ ತಿಂಗಳಿನಲ್ಲಿ ವ್ಯತ್ಯಾಸವಾಗಿರುತ್ತದೆ. ಆದರೆ ಆಗಸ್ಟ್ ತಿಂಗಳಿನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಅಂದಾಜು 1,77,000 ಟನ್ ಬೇಡಿಕೆಯಿದ್ದು, ಈಗಾಗಲೇ 49,749 ಟನ್ ಸರಬರಾಜಾಗಿರುತ್ತದೆ. 19,305 ಟನ್ ಸರಬರಾಜು ಹಂತದಲ್ಲಿದ್ದು, 1,22446 ಮೆಟ್ರಿಕ್ ಟನ್ ಸರಬರಾಜಿಗೆ ಸಿದ್ದತೆ ಮಾಡಲಾಗಿದೆ. ಸರಬರಾಜು ಯೋಜನೆಯಂತೆ ಕೇಂದ್ರ ಸರ್ಕಾರದ ಸಹಕಾರದಿಂದ ಯೂರಿಯಾ ರಸಗೊಬ್ಬರ ಸರಬರಾಜಾಗುವ ನಿರೀಕ್ಷೆಯಿದ್ದು, ಯೂರಿಯಾ ಸರಬರಾಜಿನಲ್ಲಿ ಯಾವುದೇ ತೊಂದರೆಯಾಗುವುದಿಲ್ಲಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರಗಳ ಸರಬರಾಜು ಮತ್ತು ರೇಕ್ ಟ್ರ್ಯಾಕಿಂಗ್ ಮೇಲ್ವಿಚಾರಣೆಯನ್ನು ಸಮರ್ಪವಾಗಿ ನಿಭಾಯಿಸುತ್ತಿದ್ದು, 2020 ಜುಲೈ ತಿಂಗಳ ಅಂತ್ಯದವರೆಗೆ 5,63861 ಮೆಟ್ರಿಕ್ ಟನ್ ರಸಗೊಬ್ಬರ ಕೇಂದ್ರ ಸರ್ಕಾರದಿಂದ ಸರಬರಾಜಾಗಿದೆ. ಅಂತೆಯೇ ಡಿಎಪಿ 2,77499 ಮೆ.ಟನ್,ಕಾಂಪ್ಲೆಕ್ಸ್ ರಸಗೊಬ್ಬರ 5,17,144 ಮೆಟ್ರಿಕ್ ಟನ್ ಸರಬರಾಜಾಗಿದೆ ಹಾಗೂ ಎಂಒಪಿ ರಸಗೊಬ್ಬರ ಜುಲೈ ಅಂತ್ಯದವರೆಗೆ 1,31,533 ಮೆಟ್ರಿಕ್ ಟನ್ ಸರಬರಾಜಾಗಿದ್ದು, ಒಟ್ಟಾರೆ 14, 90,970 ಮೆಟ್ರಿಕ್ ಟನ್ ರಸಗೊಬ್ಬರ ಸರಬರಜಾರಾಗಿರುತ್ತದೆ ಎಂದು ಬಿ.ಸಿ.ಪಾಟೀಲರು ಹೇಳಿದ್ದಾರೆ.
ಪ್ರಮುಖವಾಗಿ ರೈತ ಬಾಂಧವರು ಯೂರಿಯಾ ರಸಗೊಬ್ಬರ ಬಳಕೆಯನ್ನು ಅಗತ್ಯಕ್ಕಿಂತ ಹೆಚ್ಚು ಬಳಸಬಾರದು. ಬೇಡಿಕೆಗನುಗುಣವಾಗಿ ಬಳಸಬೇಕು. ಯೂರಿಯಾ ರಸಗೊಬ್ಬರದ ಅತಿ ಬಳಕೆಯಿಂದ ಬೆಳೆಗಳಿಗೆ ಕೀಟ ರೋಗಬಾಧೆಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಇಳುವರಿ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದಾಗಿ ಕೃಷಿ ಸಚಿವರು ರೈತ ಬಾಂಧವರಲ್ಲಿಮನವಿ ಮಾಡಿದ್ದಾರೆ.

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026
Tags: AgricultureAgriculture MinisterAgriculture Minister BC PatilBC Patilbengalurubsy govtfertilizerskarnatakawholesalers
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram