ಕೋಲಾರ: ಇಡಿ, ಸಿಬಿಐ ಇರುವುದು ಕೇವಲ ಕಾಂಗ್ರೆಸ್ ಗಾಗಿ ಮಾತ್ರ ಇವೆ ಎನ್ನುವಂತಹ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ದಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಜನ್ನಘಟ್ಟ ವೆಂಕಟಮುನಿಯಪ್ಪ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ (Anwar Manippady) ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಮತ್ತು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) 150 ಕೋಟಿ ರೂ.ಗಳ ಆರೋಪ ಮಾಡಿದ್ದಾರೆ. ಆದರೂ ಸಿಬಿಐ ಮೌನ ವಹಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಲಂಚದ ಆರೋಪ ಮಾಡುತ್ತಿರುವುದು ಅನ್ವರ್ ಮಾಣಿಪ್ಪಾಡಿ ಸಿಎಂ ಅಲ್ಲ. ಈ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಡ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.