ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ರಾಜಕೀಯ ಒತ್ತಡ : ಸಲೀಂ
ಬೆಂಗಳೂರು : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಆತ್ಮಹತ್ಯಗೆ ಯತ್ನ ಪ್ರಕರಣವನ್ನು ತನಿಖೆಗೆ ಕೊಡದಿದ್ದರೇ ನಾವು ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಸುಲಭವಾದ್ದದ್ದಲ್ಲ. ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ರಾಜಕೀಯ ಒತ್ತಡವಿದೆ.
ಈಗಾಗಲೇ ಸಾಕಷ್ಟು ಮಾಹಿತಿಗಳು ಹರಿದುಬರುತ್ತವೆ. ಯಾವುದೋ ಸಿಡಿಯಿಂದ ಅವರು ಈ ರೀತಿ ಮಾಡಿಕೊಂಡಿದ್ದಾರಂತೆ. ಹೀಗಾಗಿ ಇದರ ಬಗ್ಗೆ ವಿಶೇಷ ತಂಡದಿಂದ ತನಿಖೆಯಾಗಬೇಕು.
ನಾನು 17 ಶಾಸಕರ ನಾಯಕನಲ್ಲ : ಮಿತ್ರಮಂಡಳಿಗೆ `ಸಾಹುಕಾರ್’ ಶಾಕ್
ಸರ್ಕಾರ ಕೂಡಲೇ ತನಿಖೆಗೊಳಪಡಿಸಬೇಕು. ಅದರ ಹಿಂದಿರುವ ಸತ್ಯಾಂಶ ಹೊರಬರಬೇಕು. ತನಿಖೆಗೆ ಕೊಡದೇ ಹೋದರೆ ತಪ್ಪು ಸಾಬೀತಾದಂತೆ ಎಂದರು.
ಒಂದು ವೇಳೆ ಈ ಪ್ರಕರಣವನ್ನು ತನಿಖೆಗೆ ಕೊಡದಿದ್ದರೆ ನಾವು ಹೋರಾಟ ಹಮ್ಮಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಪ್ರಕರಣವನ್ನ ಮುಚ್ಚುವ ಪ್ರಯತ್ನ ಮಾಡಬಾರದು ಎಂದು ಸಲೀಂ ತನಿಖೆಗೆ ಆಗ್ರಹಿಸಿದರು.
ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಕುಟುಂಬಸ್ಥರು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









