ರಾಮನಗರ: ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ರಕ್ತದೋಕುಳಿ ಹರಿದಿದೆ.
ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಹಲ್ಲೆ (attacked) ನಡೆಸಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ (rowdy sheeter) ಹರ್ಷ ಆ್ಯಂಡ್ ಗ್ಯಾಂಗ್ ನಿಂದ ಈ ಕೃತ್ಯ ನಡೆದಿರುವ ಆರೋಪ ಕೇಳಿ ಬಂದಿದೆ.
ದಾರಿಗೆ ಅಡ್ಡ ನಿಂತಿದ್ದಾರೆ ಎಂಬ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಈ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆದ ಕಾರಣ ಇಡಿ ಬಡಾವಣೆಯಲ್ಲಿ ಆತಂಕ ನಿರ್ಮಾಣವಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.








