AIATSL Recruitment 2025 – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು:
ಇಲಾಖೆ ಹೆಸರು ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್
ಹುದ್ದೆಗಳ ಹೆಸರು ಆಫೀಸರ್ ಮತ್ತು ಜೂನಿಯರ್ ಆಫೀಸರ್
ಒಟ್ಟು ಹುದ್ದೆಗಳು 145
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಈ ಕೆಳಗಿನಂತೆ ಮಾಸಿಕ ವೇತನ ಇರುತ್ತದೆ.
– ಅಧಿಕಾರಿ (ಭದ್ರತೆ) ರೂ.45000/-
– ಕಿರಿಯ ಅಧಿಕಾರಿ (ಭದ್ರತೆ) ರೂ.29760/-
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಮುಂಬೈ: AI ಏರ್ಪೋರ್ಟ್ ಸರ್ವೀಸಸ್ ಲಿಮಿಟೆಡ್,
GSD ಕಾಂಪ್ಲೆಕ್ಸ್, CSMI ವಿಮಾನ ನಿಲ್ದಾಣ,
CISF ಗೇಟ್ ನಂ.5 ಹತ್ತಿರ,
ಸಹರ್, ಅಂಧೇರಿ ಪೂರ್ವ,
ಮುಂಬೈ -400099
ನೇರ ಸಂದರ್ಶನ ದಿನಾಂಕ : 06, 07 ಮತ್ತು 08 ಜನವರಿ 2025