AICC Election | ಗೆಹ್ಲೋಟ್ ಔಟ್.. ದಿಗ್ವಿಜಯ್ ಸಿಂಗ್ ಇನ್
ನವದೆಹಲಿ : ಎಐಸಿಸಿ ಅಧ್ಯಕ್ಷಗಿರಿ ಯಾರಿಗೆ ? ಸದ್ಯ ದೇಶದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆ. ದೇಶದಾದ್ಯಂತೆ ಕೊನೆಯುಸಿರಿನಲ್ಲಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಯಾರಾಗುತ್ತಾರೆ ಅನ್ನೋ ಕುತೂಹಲ ಕೆಲವರದ್ದಾದ್ರೆ, ನೆಹರು ಕುಟುಂಬದವರು ಅಲ್ಲದೇ ಬೇರೆ ಯಾರು ಕಾಂಗ್ರೆಸ್ ಸಾರಥಿ ಆಗುತ್ತಾರೆ ಅನ್ನೋ ಪ್ರಶ್ನೆ ಕೂಡ ಹಲವರದ್ದು.
ಈ ನಡುವೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮುಂದಿನ ಎಐಸಿಸಿ ಅಧ್ಯಕ್ಷ ಅಂತಾ ಹೇಳಲಾಗುತ್ತಿತ್ತು. ಆದ್ರೆ ಇದೀಗ ಅಶೋಕ್ ಗೆಹ್ಲೋಟ್ ಯೂಟರ್ನ್ ಹೊಡೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಸ್ವತಃ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಎಲ್ಲರ ಚಿತ್ತ ದಿಗ್ವಿಜಯ್ ಸಿಂಗ್ ನತ್ತ ನೆಟ್ಟಿದೆ. ಯಾಕಂದರೇ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸ್ಪರ್ಧೆ ಮಾಡೋದು ಬಹುತೇಕ ಖಚಿತ.
ಅವರು ಈಗಾಗಲೇ ಎಐಸಿಸಿ ಕಚೇರಿಗೆ ಭೇಟಿ ನೀಡಿ ನಾಮಪತ್ರ ಪಡೆದಿದ್ದು, ನಾಳೆ ಅವರು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಲಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿದ್ದ ದಿಗ್ವಿಜಯ್ ಸಿಂಗ್ ಅವರನ್ನು ಸೋನಿಯಾ ಗಾಂಧಿ ಅವರೇ ಖುದ್ದಾಗಿ ಕರೆದು ನಾಮಪತ್ರ ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರಂತೆ. ಹೀಗಾಗಿ ಅವರು ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದರೊಂದಿಗೆ ದಿಗ್ವಿಜಯ್ ಸಿಂಗ್ ಅವರೇ ಎಐಸಿಸಿ ಅಧ್ಯಕ್ಷರಾಗುವು ಪಕ್ಕಾ ಆಗಿದೆ. ಯಾಕಂದರೇ ಸ್ವತಃ ಸೋನಿಯಾ ಗಾಂಧಿ ಅವರೇ ದಿಗ್ವಿಜಯ್ ಸಿಂಗ್ ಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರೇ ಅಧ್ಯಕ್ಷರಾಗುತ್ತಾರೆ ಎಂದು ಅಂದಾಜಿಸಲಾಗುತ್ತಿದೆ. ಆದ್ರೂ ಶಶಿತರೂರು ಕೂಡ ಎಐಸಿಸಿ ಅಧ್ಯಕ್ಷಗಿರಿಯ ರೇಸ್ ನಲ್ಲಿದ್ದಾರೆ.