AICC | ಕಾಂಗ್ರೆಸ್ ನ ಭೀಷ್ಮ ಖರ್ಗೆ ಗೆ ಸಾರಥ್ಯ
130ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷದ ಸಾರಥಿ ಯಾರಾಗ್ತಾರೆ ? ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಂತೆ ಕಾಣುತ್ತಿದೆ.
ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಎಐಸಿಸಿ ಅಧ್ಯಕ್ಷ ಚುನಾವಣೆ ಘೋಷಣೆ ಮಾಡುತ್ತಿದ್ದಂತೆ ಅಶೋಕ್ ಗೆಹ್ಲೋಟ್ ಅವರೇ ಎಐಸಿಸಿ ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗಿತ್ತು.
ಆದ್ರೆ ರಾಜಸ್ಥಾನ ಕಾಂಗ್ರೆಸ್ ನಲ್ಲಿ ನಡೆದ ಬೆಳವಣಿಗೆ ಅಶೋಕ್ ಗೆಹ್ಲೋಟ್ ಅವರು ಚುನಾವಣೆ ಹಿಂದೆ ಸರಿಯುವಂತೆ ಮಾಡಿದೆ.
ಇದಾದ ಬಳಿಕ ದಿಗ್ವಿಜಯ್ ಸಿಂಗ್ ಅವರು ಎಐಸಿಸಿ ಅಧ್ಯಕ್ಷರಾಗುತ್ತಾರೆ ಅಂತಾ ಅಂದಾಜಿಸಲಾಗಿತ್ತು.
ಆದ್ರೆ ಇದೀಗ ಮಲ್ಲಿಕಾರ್ಜುನ್ ಖರ್ಗೆ ಹೆಸರು ಮುನ್ನಲೆಗೆ ಬಂದಿದ್ದು, ಖರ್ಗೆ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇವರಿಗೆ ಗಾಂಧಿ ಕುಟುಂಬದಂತೆ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಬಲ ಸೂಚಿಸಿದ್ದಾರೆ.
ಹೀಗಾಗಿ ಅವರೇ ಎಐಸಿಸಿ ಅಧ್ಯಕ್ಷರಾಗುತ್ತಾರೆ ಎನ್ನುತ್ತಿದ್ದಾರೆ ರಾಜಕೀಯ ಪಂಡಿತರು.
ಹಾಗಾದ್ರೆ ಖರ್ಗೆ ಪ್ಲಸ್ ಪಾಯಿಂಟ್ ಏನು ?
ಬಿಜೆಪಿ ವಿರುದ್ಧ ಗಟ್ಟಿ ಧ್ವನಿ
ದಲಿತ ಸಮುದಾಯದ ನಾಯಕ
ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಳ್ಳುವ ಸ್ವಭಾವ
ಹಿಂದಿ ಭಾಷೆಯ ಮೇಲಿನ ಹಿಡಿತ
ಈ ಎಲ್ಲಾ ಕಾರಣಗಳಿಂದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕಾಂಗ್ರೆಸ್ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ.
ಇತ್ತ ಶಶಿತರೂರು ಕೂಡ ಎಐಸಿಸಿ ಅಧ್ಯಕ್ಷ ರೇಸ್ ನಲ್ಲಿದ್ದಾರೆ. ಅವರೂ ಕೂಡ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.