AICC ಜೂ.23ಕ್ಕೆ ನಿಗದಿಯಾಗಿದ್ದ ‘ಕೈ’ ಅಧ್ಯಕ್ಷರ ಆಯ್ಕೆಯ ಚುನಾವಣೆ ಮತ್ತೆ ಮುಂದೂಡಿಕೆ
ನವದೆಹಲಿ : ಜೂನ್ 23ಕ್ಕೆ ನಿಗದಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ.
ಇಂದು ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಕಾರ್ಯಸಮಿತಿ ಸಭೆ ನಡೆಯಿತು.
ಈ ಸಭೆಯಲ್ಲಿ ಇದೇ ಜೂನ್ 23ಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗಿತ್ತು.
ಆದ್ರೆ ಕಾಂಗ್ರೆಸ್ ನ ಎಲ್ಲ ನಾಯಕರು ಕೊರೊನಾ ಸಂಕಷ್ಟದಲ್ಲಿ ಚುನಾವಣೆ ನಡೆಸೋದು ಸೂಕ್ತವಲ್ಲ ಎಂದು ನಿರ್ಧರಿಸಿದ್ದಾರೆ.
ಹೀಗಾಗಿ ಚುನಾವಣೆ ಮುಂಡೂಡಿಕೆ ಮಾಡಲು ನಿರ್ಧಾರ ಮಾಡಲಾಗಿದೆ.
ಅಂದಹಾಗೆ ಕಳೆದ ವರ್ಷ ಆಗಸ್ಟ್ ನಿಂದಲೂ ಚುನಾವಣೆ ಮುಂದೂಡಿಕೆಯಾಗುತ್ತಾ ಬಂದಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ನಡೆಸಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುಂಡ ಕಾರಣ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು.










