ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸಿಎಂ ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಗೆ ಬಂದು ಮತ್ತೆ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ (Jagadish Shettar) ವಿಷಯವಾಗಿಯೇ ಈಗ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಹೀಗಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಐಎಸಿಸಿ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಿ ನಿರ್ಧರಿಸೇಕು. ಅವರ ಸಿದ್ಧಾಂತ, ಹಿನ್ನೆಲೆ ಬಗ್ಗೆ ತಿಳಿದುಕೊಂಡು ನಿಷ್ಠಾವಂತರಿಗೆ ಮಾತ್ರ ಅವಕಾಶ ನೀಡಬೇಕು. ಅವರ ತತ್ವಗಳ ಆಧಾರದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಹೇಳಿದ್ದಾರೆ. ಅಲ್ಲದೇ, ಪರೋಕ್ಷವಾಗಿ ಜಗದೀಶ ಶೆಟ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.