ಚಿಕ್ಕಮಗಳೂರು : ಎಐಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಈ ಸಂಬಂಧ ಸಚಿವ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ ರವಿ, ಹಿಟ್ಟು ಹಳಸಿತ್ತು, ಡ್ಯಾಶ್ ಹಸಿದಿತ್ತು. ಕಾಂಗ್ರೆಸ್ ನವರಿಗೆ ಗಾಂಧಿ ಕುಟುಂಬವನ್ನು ಬಿಟ್ಟರೆ ಬೇರೆ ಗತಿಯಿಲ್ಲ. ಹಾಗಾಗಿಯೇ, ಅಧ್ಯಕ್ಷಗಾದಿಯತ್ತ ಗಾಂಧಿ ಕುಟುಂಬವನ್ನೇ ಅವಲಂಬಿಸಿಕೊಂಡಿದ್ದಾರೆ. ಕಾಂಗ್ರೆಸ್ ನವರು ಗಾಂಧಿ ಕುಟುಂಬದ ಮೇಲೆ ಡಿಪೆಂಡ್ ಆಗಿದ್ದಾರೆ ಎಂದು ಕುಟುಕಿದರು.
ಇದೇ ವೇಳೆ ಡಿಶಿಕೆ ವಿರುದ್ಧ ಗುಡುಗಿದ ರವಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ. ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.









