ಎಲೆಕ್ಷನ್ ಮೂಲಕ ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ
ನವದೆಹಲಿ : ಸೋತು ಸೋತು ಸುಣ್ಣವಾಗಿರುವ ಪಕ್ಷಕ್ಕೆ ಚೇತರಿಕೆ ಕೊಡಲು ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಮುಂದಾಗಿದೆ. ಈ ಹಿನ್ನೆಲೆ ಮುಂದಿನ ವಾರ ಪಾರ್ಟಿ ಮುಖಂಡ ಸಭೆ ನಡೆಸಲು ನಾಯಕರು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ 2019ರ ಜುಲೈನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಅಂದಿನಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಖಾಲಿ ಇದೆ. ರಾಹುಲ್ ರಾಜೀನಾಮೆ ಬಳಿಕ ಸೋನಿಯಾ ಗಾಂಧಿ ಅವರು 2019ರ ಆಗಸ್ಟ್ ನಿಂದ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪಾರ್ಟಿಗೆ ಪೂರ್ತಿಸ್ಥಾಯಿ ಅಧ್ಯಕ್ಷರ ನೇಮಕ, ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಕುರಿತು ಪಕ್ಷದ ಬಹುತೇಕ ಹಿರಿಯ ಮುಖಂಡರು ಧ್ವನಿ ಎತ್ತಿದ್ದರು.
ತಳಮಟ್ಟದಿಂದಲೂ ಪಕ್ಷವನ್ನು ಬಲಪಡಿಸಲು ಪಕ್ಷದಲ್ಲಿ ಬದಲಾವಣೆ ಅನಿವಾರ್ಯ ಎಂದು 23 ಮುಖಂಡರು ಸೋನಿಯಾ ಗಾಂಧಿಅವರಿಗೆ ಪತ್ರ ಬರೆದಿದ್ದರು.
ಕಾಂಗ್ರೆಸ್ ಪಕ್ಷದ ತಳಮಟ್ಟದಿಂದ ಹಿಡಿದು ಕಾಂಗ್ರೆಸ್ ಕಾರ್ಯಕಾರಿ ಸಮಿತಿವರೆಗಿನ ಎಲ್ಲ ಹಂತದ ನಾಯಕರನ್ನು ಬದಲಾವಣೆ ಮಾಡಬೇಕು ಎಂದು ನಾಯಕರು ಒತ್ತಾಯಿಸಿದ್ದಾರೆ.
ಪಕ್ಷದಲ್ಲಿನ ಅಸಮಾಧಾನಕ್ಕೆ ಚೆಕ್ ಇಡುವ ದೃಷ್ಠಿಯಿಂದ ಕಳೆದ ಡಿಸೆಂಬರ್ ನಲ್ಲಿ ಸೋನಿಯಾ ಗಾಂಧಿ ಪಕ್ಷದ ಪ್ರಮುಖ ನಾಯಕರು ಹಾಗೂ ಪತ್ರ ಬರೆದಿದ್ದ ನಾಯಕರೊಂದಿಗೆ ವಿಶೇಷ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದರು.
ಸಭೆಯಲ್ಲಿದ್ದ ಕೆಲ ಮುಖಂಡರು ರಾಹುಲ್ ಗಾಂಧಿ ಅವರಿಗೆ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದರು. ಇನ್ನೂ ಕೆಲವರು ಚುನಾವಣೆ ಮೂಲಕ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ !
ಇದೇ ವಿಚಾರವಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಮುಂದಿನ ವಾರ ಮತ್ತೆ ಹಿರಿಯ ನಾಯಕರ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಒಂದು ವೇಳೆ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸದಿದ್ದರೆ ಆ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಐಸಿಸಿ ಸದಸ್ಯರಿಗೆ ಸಂಬಂಧಿಸಿದ ಐಡಿ ಕಾರ್ಡ್ ಗಳ ಡಿಜಿಟಲೀಕರಣ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಆನ್ ಲೈನ್ ಮೂಲಕ ಚುನಾವಣೆ ನಡೆಸುವ ಅಂಶದ ಬಗ್ಗೆ ಹೈಮಾಂಡ್ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









