AICC | ಯಾರಿಗೆ ಎಐಸಿಸಿ ಅಧ್ಯಕ್ಷ ಪಟ್ಟ..? ರೇಸ್ ನಲ್ಲಿ ಮಲ್ಲಿಕಾರ್ಜುನ್ ಖರ್ಗೆ
ಯಾರಿಗೆ ಎಐಸಿಸಿ ಅಧ್ಯಕ್ಷ ಪಟ್ಟ..? ಸದ್ಯ ಕಾಂಗ್ರೆಸ್ ಕಲಿಗಳೂ ಸೇರಿದಂತೆ ಎಲ್ಲರಲ್ಲೂ ಮೂಡಿರುವ ಪ್ರಶ್ನೆ ಇದು.
ಎಐಸಿಸಿ ಸಾರಥ್ಯದ ವಿಷಯ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.
ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದು, ಅಕ್ಟೋಬರ್ ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಹಿರಿಯ ನಾಯಕರನ್ನೇ ಒಳಗೊಂಡಿರುವ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಸದ್ಯದ ಪರಿಸ್ಥಿತಿಯ ಕ್ರಿಯಾಶೀಲ ನಾಯಕ.
ಹೀಗಾಗಿ ಅವರೇ ಮತ್ತೆ ಪಕ್ಷದ ಸಾರಥ್ಯ ವಹಿಸಬೇಕೆಂದು ಒಂದು ಬಣ ಬಿಗಿ ಪಟ್ಟು ಹಿಡಿದಿದೆ.
ಆದ್ರೆ ರಾಹುಲ್ ಈ ಅತ್ಯುನ್ನತ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.
2019ರ ಲೋಕಕದನದಲ್ಲಿ ಸೋಲುಂಡ ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್, ಮತ್ತೆ ಎಐಸಿಸಿ ಅಧ್ಯಕ್ಷರಾಗಲು ಮನಸ್ಸು ಮಾಡುತ್ತಿಲ್ಲ.
ಇತ್ತ ಈ ಬಾರಿ ಗಾಂಧಿ ಕುಟುಂಬೇತರ ನಾಯಕರೊಬ್ಬರು ಪಕ್ಷದ ಸಾರಥ್ಯ ವಹಿಸುವ ಸಾಧ್ಯತೆ ಇದೆ.

ಸದ್ಯ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಶಶಿ ತರೂರ್ ಹೆಸರು ಹೆಚ್ಚಾಗಿ ಕೇಳಿಬರುತ್ತಿದೆ.
ಇದೀಗ ಈ ರೇಸ್ ಗೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೆಸರು ಮುನ್ನಲೆಗೆ ಬಂದಿದೆ.
ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಅನುಭವಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತ ಕೊನೆಯುಸಿರಿನಲ್ಲಿರುವ ಕಾಂಗ್ರೆಸ್, ದಲಿತ ನಾಯಕ ನಾಯಕ ಮಲ್ಲಿಕಾರ್ಜುನ್ ಅವರಿಗೆ ಅಧ್ಯಕ್ಷಗಿರಿ ನೀಡಿ ದಲಿತ ಸಮುದಾಯದ ಮತಗಳನ್ನು ಸೆಳೆಯಲು ಪ್ಲಾನ್ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಮುಂದೆ ಲೋಕಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆಗಳು ಬರಲಿವೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷನ ಅವಶ್ಯಕತೆ ಹೆಚ್ಚಾಗಿದೆ.
ಇದನ್ನ ಅರಿತಿರುವ ಕಾಂಗ್ರೆಸ್ ನಾಯಕರು, ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಮುಂದಾಗಿದ್ದಾರೆ.
ಅಕ್ಟೋಬರ್ 15 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. 19ಕ್ಕೆ ರಿಸಲ್ಟ್ ಬರಲಿದೆ.