ವಾಯುಭಾರ ಕುಸಿತ | ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಈ ಸಂಭಂದ ಮುಂದಿನ ನಾಲ್ಕು ದಿನ ರಾಜ್ಯದ ಹಲವಡೆ ಮಳೆಯಾಗಿದ್ದು, ಇನ್ನೂ ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾ.20 ಮಾ.24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ ಮಳೆಯಾಗಿದೆ.
ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾ.20 ಮತ್ತು 21ರಂದು ಮಳೆಯಾಗಲಿದ್ದು, ಮಾ.22 ಮತ್ತ 24ರಂದು ರಾಯಚೂರು, ವಿಜಯಪುರ ಮತ್ತು ಯಾದಗರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಮಾ.20 ಹಾಗೂ 24ರಂದು ಮಾತ್ರ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಎಲ್ಲಾ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








