ಶ್ರೀನಗರ: ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಕಾಶ್ಮೀರದ ಪೂಂಚ್ ನಲ್ಲಿ ಉಗ್ರರು ದಾಳಿ ನಡೆಸಿದೆ. ಕೂಡಲೇ ದಾಳಿ ನಡೆಸಿದ ಸೇನೆ ಹಲವರನ್ನು ಬಂಧಿಸಿದೆ ಎನ್ನಲಾಗಿದೆ.
ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆದಿದೆ. ಸೇನೆಯು ಹೆಲಿಕಾಪ್ಟರ್ ಬಳಸಿ ದಾಳಿ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಕೂಡ ನಡೆಸಿದೆ. ಅಧಿಕಾರಿಗಳು, ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಹಾಗೂ ಜಮ್ಮು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಐವರು ಐಎಎಫ್ ಸಿಬ್ಬಂದಿ ಗಾಯಗೊಂಡಿದ್ದು, ಓರ್ವರು ಸಾವನ್ನಪ್ಪಿದ್ದಾರೆ. ಶಹಸಿತಾರ್ ಹತ್ತಿರ ಈ ಘಟನೆ ನಡೆದಿದೆ. ದಾಳಿ ನಡೆಸಿದ ನಂತರ ಉಗ್ರರು ಅರಣ್ಯದೊಳಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಉಗ್ರರಿಗಾಗಿ ಸೇನೆ ಶೋಧ ಕಾರ್ಯ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.