ಕೇರಳದ ಕೋಝಿಕೋಡ್’ನಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಅಪಘಾತ – ಮೂವರ ದುರ್ಮರಣ
ಕೋಝಿಕೋಡ್, ಅಗಸ್ಟ್ 7: ಕೇರಳದ ಕೋಝಿಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.
ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ಶುಕ್ರವಾರ ಕೋಝಿಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್ವೇಯಲ್ಲಿ ಸ್ಕಿಡ್ ಆಗಿದ್ದು, ವಿಮಾನವು ತೀವ್ರವಾಗಿ ಹಾನಿಗೊಳಗಾಗಿದೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸಾವು ನೋವುಗಳ ಇನ್ನಷ್ಟು ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.
ದುಬೈಯಿಂದ ಏರ್ ಇಂಡಿಯಾ ವಿಮಾನ ಸಂಖ್ಯೆ IX-1344, 170 ಪ್ರಯಾಣಿಕರೊಂದಿಗೆ ಕೋಝಿಕೋಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ವಿಮಾನ ನಿಲ್ದಾಣದ ರನ್ವೇಯಲ್ಲಿ ಲ್ಯಾಂಡ್ ಆಗುವಾಗ ಇಂದು ರಾತ್ರಿ 7.40 ರ ಸುಮಾರಿಗೆ ಪ್ರದೇಶದಲ್ಲಿ ಭಾರಿ ಮಳೆಯ ಮಧ್ಯೆ ಈ ಘಟನೆ ನಡೆದಿದೆ. ವಿಮಾನದಲ್ಲಿದ್ದ ಹಲವಾರು ಜನರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.