ಮುಂಬಯಿ ನಗರದ ಉಪನಗರದ ಫ್ಲಾಟ್ ನಲ್ಲಿ ತರಬೇತಿ ನಿರತ ಗಗನಸಖಿ ಯೊಬ್ಬರ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ.
ಛತ್ತೀಸ್ಗಢದಿಂದ ಬಂದಿದ್ದ ರೂಪಲ್ ಓಗ್ರೆ (25) ಏರ್ ಇಂಡಿಯಾಗೆ ಆಯ್ಕೆಯಾದ ನಂತರ ಈ ವರ್ಷದ ಏಪ್ರಿಲ್ನಲ್ಲಿ ಮುಂಬೈಗೆ ಸ್ಥಳಾಂತರವಾಗಿದ್ದರು. ಕೆಲವು ದಿನಗಳ ಹಿಂದೆ ಮನೆಗೆ ತೆರಳಿದ್ದ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿನ ಫ್ಲಾಟ್ ನಲ್ಲಿ ಅವರು ವಾಸಿಸುತ್ತಿದ್ದಾರೆ.
ಓಗ್ರೆ ಅವರ ಕೊಲೆಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 40 ವರ್ಷದ ವಿಕ್ರಮ್ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಹೌಸಿಂಗ್ ಸೊಸೈಟಿಯಲ್ಲಿನ ಭದ್ರತಾ ಕ್ಯಾಮೆರಾಗಳ ಪರಿಶೀಲನೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗೆ 12 ತಂಡಗಳನ್ನು ರಚಿಸಲಾಗಿದೆ. ರೂಪಾಲ್ ಕಾಲ್ ರಿಸೀವ್ ಮಾಡದ ಕಾರಣ, ಮನೆಗೆ ಹೋಗಿ ನೋಡಲು ಪೋಷಕರು, ಸ್ನೇಹಿತರಿಗೆ ಹೇಳಿದ್ದರು. ಅಲ್ಲಿ ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.